ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಜು. 17 ರಮದು ಭಾನುವಾರ ಕೇರಳದ ಪ್ರಸಿದ್ಧ ನಾಟಿವೈದ್ಯರುಗಳಿಂದ ಶರೀರದ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಯುರ್ವೇದ ಸಸ್ಯ ಹಾಗೂ ಮೂಲಿಕೆಗಳನ್ನು ಬಳಸಿ ಔಷಧೀಯ ಗಂಜಿ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಬೆಳಿಗ್ಗೆ 11.15 ಕ್ಕೆ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಆಯುರ್ವೇದಿಕ್ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಭಟ್ ರವರು ಆರೋಗ್ಯದ ಕುರಿತು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ ಔಷಧೀಯ ಗಂಜಿ ವಿತರಣಾ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.





