ನವದೆಹಲಿ: ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಕೊರತೆ ಇಲ್ಲ. 2022-23ನೇ ಶೈಕ್ಷಣಿಕ ವರ್ಷದಲ್ಲಿ ದೇಶದಾದ್ಯಂತ 4 ಕೋಟಿ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ ಸೋಮವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.
0
samarasasudhi
ಜುಲೈ 18, 2022
ನವದೆಹಲಿ: ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಕೊರತೆ ಇಲ್ಲ. 2022-23ನೇ ಶೈಕ್ಷಣಿಕ ವರ್ಷದಲ್ಲಿ ದೇಶದಾದ್ಯಂತ 4 ಕೋಟಿ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣಾ ದೇವಿ ಸೋಮವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.
'ಎನ್‌ಸಿಇಆರ್‌ಟಿ ಪ್ರಧಾನ ಕಚೇರಿಯಲ್ಲಿರುವ ಮಾರಾಟ ಕೇಂದ್ರ, ಅಜ್ಮೀರ್, ಭೋಪಾಲ್, ಭುವನೇಶ್ವರ, ಮೈಸೂರು ಮತ್ತು ಶಿಲ್ಲಾಂಗ್‌ನಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಲ್ಲಿ (ಆರ್‌ಐಇ) ಹಾಗೂ ಅಹಮದಾಬಾದ್, ಬೆಂಗಳೂರು, ಕೋಲ್ಕತ್ತ ಮತ್ತು ಗುವಾಹಟಿಯಲ್ಲಿರುವ ಪ್ರಾದೇಶಿಕ ಕೇಂದ್ರಗಳ ಮೂಲಕ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ. ಎನ್‌ಸಿಇಆರ್‌ಟಿ ವೆಬ್ ಪೋರ್ಟಲ್ ಮೂಲಕವೂ ಪಠ್ಯಪುಸ್ತಕಗಳನ್ನು ಆರ್ಡರ್ ಮಾಡಬಹುದು' ಎಂದೂ ತಿಳಿಸಿದ್ದಾರೆ.