HEALTH TIPS

ಮಣಿಯಂಪಾರೆ- ಅಲ್ಚಾರ್ ರಸ್ತೆ ನಿರ್ಮಾಣಕ್ಕೆ ಸಂಸದರಿಗೆ ಮನವಿ

               ಕುಂಬಳೆ: ಪುತ್ತಿಗೆ ಪಂಚಾಯತಿನ 2ನೇ ವಾರ್ಡಿನ ಮಣಿಯಂಪಾರೆ-ಅಲ್ಚಾರ್ ಮೂಲಕ ಶಿರಿಯ ಅಣೆಕಟ್ಟಿಗೆ ತೆರಳುವ ರಸ್ತೆ ನಿರ್ಮಾಣಕ್ಕಾಗಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರಿಗೆ ಮನವಿ ಸಲ್ಲಿಸಲಾಯಿತು. ಮಂಜೇಶ್ವರ ಬ್ಲಾಕ್ ಪಂಚಾಯತು ಸದಸ್ಯ ಕೆ.ಪಿ.ಆನಿಲ್ ಕುಮಾರ್ ನೇತೃತ್ವದಲ್ಲಿ ಫಲಾನುಭವಿಗಳ ಪರವಾಗಿ ಮನವಿ ಸಲ್ಲಿಸಲಾಗಿದ್ದು ಈ ಸಂದರ್ಭದಲ್ಲಿ ಕಾಸರಗೋಡು ಜಿ.ಪಂ.ಸದಸ್ಯ ನಾರಾಯಣ ನಾಯ್ಕ್, ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಉಪಸ್ಥಿತರಿದ್ದರು. ಆಲ್ಚಾರ್ ಪ್ರದೇಶದಲ್ಲಿ ನೂರಾರು ಕುಟುಂಬಗಳು ಸರಿಯಾದ ರಸ್ತೆ ಇಲ್ಲದೆ ಸಂಕಷ್ಟಪಡುತ್ತಿದ್ದು ಈ ಬಗ್ಗೆ ಗಮನ ಹರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries