ಮುಂಬೈ: ಮಹಾರಾಷ್ಟ್ರದಲ್ಲಿ ಈಗ ಊರ ಹೆಸರುಗಳ ಮರುನಾಮಕರಣ ಪ್ರಕ್ರಿಯೆ ಶುರುವಾಗಿದೆ. ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ಊರುಗಳ ಹೆಸರುಗಳನ್ನು ಮರುನಾಮಕಣ ಮಾಡಲು ನಿರ್ಧರಿಸಲಾಗಿದ್ದು, ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಇದು ಗುರಿಯಾಗಿದೆ.
0
samarasasudhi
ಜುಲೈ 16, 2022
ಮುಂಬೈ: ಮಹಾರಾಷ್ಟ್ರದಲ್ಲಿ ಈಗ ಊರ ಹೆಸರುಗಳ ಮರುನಾಮಕರಣ ಪ್ರಕ್ರಿಯೆ ಶುರುವಾಗಿದೆ. ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ಊರುಗಳ ಹೆಸರುಗಳನ್ನು ಮರುನಾಮಕಣ ಮಾಡಲು ನಿರ್ಧರಿಸಲಾಗಿದ್ದು, ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಇದು ಗುರಿಯಾಗಿದೆ.
ಔರಂಗಾಬಾದ್ಗೆ ಛತ್ರಪತಿ ಸಂಭಾಜಿನಗರವೆಂದೂ, ಉಸ್ಮಾನಾಬಾದ್ಗೆ ಧಾರಾಶಿವ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದಿದ್ದಾರೆ ಶಿಂಧೆ.
ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಈ ಆದೇಶ ಹೊರಡಿಸಿತ್ತು ಎಂದು ಶಿಂಧೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಮೊಘಲರ ಆಡಳಿತದಲ್ಲಿ ಔರಂಗಜೇಬ್, ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಔರಂಗಾಬಾದ್ ನಗರ ಸ್ಥಾಪನೆ ಮಾಡಿದ್ದರು.
ಈ ನಗರವನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಲು ಬಾಳಾಸಾಹೇಬ್ ಠಾಕ್ರೆ ಸೂಚಿಸಿದ್ದರು. ಅವರ ಈ ಸೂಚನೆ ಮೇರೆಗೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಔರಂಗಾಬಾದ್ಗೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದ್ದರು. ಅದನ್ನು ಈಗ ಜಾರಿಗೆ ತರಲಾಗಿದೆ ಎಂದು ಸಿಎಂ ಶಿಂಧೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದರು.
ಮಹಾವಿಕಾಸ್ ಅಘಾಡಿ ಸಮಯದಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಇದೀಗ ಮತ್ತೊಮ್ಮೆ ಮರುಪರಿಶೀಲನೆ ಮಾಡಿದ್ದು ಸರಿಯಲ್ಲ ಎಂದು ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.