HEALTH TIPS

ಭೂ ಹಗರಣ: ಶಿವಸೇನಾ ನಾಯಕ ಸಂಜಯ್ ರಾವುತ್ ಇ.ಡಿ ವಶಕ್ಕೆ

 

            ಮುಂಬೈ: ಪತ್ರಾ ಚಾಲ್‌ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ವಶಕ್ಕೆ ಪಡೆದಿದೆ.

                  ₹1,034 ಕೋಟಿ ಮೊತ್ತದ ಪತ್ರಾ ಚಾಲ್‌ ಭೂ ಹಗರಣಕ್ಕೆ ಸಂಬಂಧಿಸಿ ಭಾನುವಾರ ಬೆಳಿಗ್ಗೆಯೇ ರಾವುತ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಹಲವು ಗಂಟೆಗಳ ಕಾಲ ಶೋಧ ನಡೆಸಿದ ಬಳಿಕ ರಾವುತ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು 'ಎಎನ್‌ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.


                  ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ಪತ್ರಾ ಚಾಲ್‌ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಇ.ಡಿ ಸೂಚಿಸಿದ ದಿನಾಂಕದಂದು ರಾಜ್ಯಸಭಾ ಸಂಸದರಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ರಾವುತ್ ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದರು.

Enforcement Directorate (ED) detains Shiv Sena leader Sanjay Raut in land scam case in Mumbai after hours of conducting raids at his residence (File Pic)
Image

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries