HEALTH TIPS

ESZ: ಇಎಸ್‌ಝೆಡ್‌ನಿಂದ ವಸತಿ, ಕೃಷಿ ಭೂಮಿ ಹೊರಗಿಡಲು ಕೇರಳ ನಿರ್ಧಾರ

 

             ತಿರುವನಂತಪುರ: ವಸತಿ ಮತ್ತು ಕೃಷಿಭೂಮಿ ಹಾಗೂ ಸರ್ಕಾರಿ, ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸಂಸ್ಥೆಗಳನ್ನು ಪರಿಸರ ಸೂಕ್ಷ್ಮ ವಲಯದ (ಇಎಸ್‌ಝೆಡ್‌) ವ್ಯಾಪ್ತಿಯಿಂದ ಒಂದು ಕಿಲೋಮೀಟರ್‌ ಹೊರಗಿಡಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

            ಸಂಪುಟ ಸಭೆ ಬಳಿಕ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

              ರಾಜ್ಯದ 23 ವನ್ಯಜೀವಿ ಅಭಯಾರಣ್ಯ ಮತ್ತು ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಒಳಗೊಂಡ ಕೇಂದ್ರ ಸರ್ಕಾರದ ಕರಡು ಅಧಿಸೂಚನೆಗೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಸತಿ ಪ್ರದೇಶ, ಕೃಷಿ ಭೂಮಿ ಮತ್ತು ಹಲವಾರು ಸಾರ್ವಜನಿಕ ಸಂಸ್ಥೆಗಳನ್ನು ಇಎಸ್‌ಝೆಡ್‌ನಿಂದ ಹೊರಗಿಡುವ ಅರಣ್ಯ ಇಲಾಖೆ ಪ್ರಸ್ತಾವವನ್ನು ಸಂಪುಟ ಅನುಮೋದಿಸಿದೆ ಎಂದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries