HEALTH TIPS

ಬತ್ತೇರಿ ಕಾಲೇಜಿನಲ್ಲಿ ಘರ್ಷಣೆ; 13 ಮಂದಿಗೆ ಗಾಯ: 14 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ


                 ವಯನಾಡು: ಸುಲ್ತಾನ್ ಬತ್ತೇರಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು 13 ಮಂದಿ ಗಾಯಗೊಂಡಿದ್ದಾರೆ.
        ಅಲ್ಫೋನ್ಸಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಿರಿಯ ಮತ್ತು ಹಿರಿಯ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ 14 ವಿದ್ಯಾರ್ಥಿಗಳ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
          ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಿರಿಯ ಶ್ರೇಣಿಯ ವಿದ್ಯಾರ್ಥಿಗಳು ಥಳಿಸಿದ್ದಾರೆ ಎಂಬುದು ದೂರು. ಘಟನೆಯಲ್ಲಿ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರು ಬತ್ತೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೂಗು ಮತ್ತು ಭುಜಕ್ಕೆ ಗಾಯವಾಗಿದೆ. ಇನ್ನು ಕೆಲವರು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಮರಳಿದರು.
          ದ್ವಿತೀಯ ವರ್ಷದ ಪ್ರವಾಸೋದ್ಯಮ ವಿಭಾಗದ ವಿದ್ಯಾರ್ಥಿಗಳು ಹಾಗೂ ಮೂರನೇ ವರ್ಷದ ವಿದ್ಯಾರ್ಥಿಗಳ ನಡುವೆ ಹಲವು ದಿನಗಳಿಂದ ವಾಗ್ವಾದ ನಡೆಯುತ್ತಿತ್ತು. ಶಿಕ್ಷಕರು ಮಧ್ಯಪ್ರವೇಶಿಸಿ ಸಮಧಾನಪಡೆಸಿದ್ದರೂ ವಾಟ್ಸ್ ಆ್ಯಪ್ ಸಂದೇಶಕ್ಕೆ ಸಂಬಂಧಿಸಿದಂತೆ ಮತ್ತೊಂದು ತಕರಾರು ನಡೆದಿದೆ. ಪೋಲೀಸರು ಪ್ರಕರಣ ದಾಖಲಿಸಿಕೊಂಡ ನಂತರ ಕಾಲೇಜು ಅಧಿಕಾರಿಗಳು ಸಂಘರ್ಷದಲ್ಲಿ ತೊಡಗಿದ್ದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries