HEALTH TIPS

75ನೇ ಸ್ವಾತಂತ್ರ್ಯೋತ್ಸವ: ಜನಸಂದಣಿ ತಪ್ಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

 

          ನವದೆಹಲಿ: ದೇಶದಾದ್ಯಂತ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿವೆ. ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡಮಟ್ಟದಲ್ಲಿ ಸಭೆ ಸೇರುವಂತಿಲ್ಲ, ಪ್ರತಿಯೊಬ್ಬರೂ ತಪ್ಪದೆ ಕೋವಿಡ್ ನಿಯಯಮಾವಳಿಗಳನ್ನು ಅನುಸರಿಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.

             ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಹದಿನೈದು ದಿನ ಅಥವಾ ತಿಂಗಳಿಗೊಮ್ಮೆ ಸ್ವಚ್ಛ ಭಾರತ ಅಭಿಯಾನವನ್ನು ಕೈಗೊಳ್ಳುವಂತೆ ತಿಳಿಸಿದೆ. ಸ್ವಯಂಪ್ರೇರಿತರಾಗಿ ನಾಗರಿಕರು ಈ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

              ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಸಮಾರಂಭಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಸೇರುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಮಾಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ.

           ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮರ ನೆಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯವು ಸರ್ಕಾರಿ ಇಲಾಖೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.

               ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,42,23,557ಕ್ಕೆ ಏರಿಕೆಯಾಗಿದೆ.

            ಇದುವರೆಗೆ 5,26,928 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 1,23,535 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries