ಕುಂಬಳೆ : ಇಲ್ಲಿನ ಶ್ರೀಕೃಷ್ಣ ವಿದ್ಯಾಲಯದಲ್ಲಿ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಒಬ್ಬಂಟಿಗಳಾಗಿ ದೇಶ ಪರ್ಯಟನೆ ಮಾಡಿದ ದಿಟ್ಟ ಹೆಣ್ಣುಮಗಳು ಹಾಗೂ ಶಾಲೆಯ ಹಳೆ ವಿದ್ಯಾರ್ಥಿನಿ ಕುಮಾರಿ ಅಮೃತ ಜೋಶಿಯವರು ದೀಪಪ್ರಜ್ವಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ, ತಾನು ಸುಸಂಸ್ಕøತಳಾಗಲು ಈ ಶಾಲೆಯೇ ಪ್ರೇರಣೆ ಎಂದರು.
ಮುಖ್ಯ ಅತಿಥಿಗಳಾಗಿ ಕುಂಬಳೆ ಪೋಲೀಸ್ ಠಾಣಾಧಿಕಾರಿ ಸುರೇಶ್ ಉಪಸ್ಥಿತರಿದ್ದು ಸ್ವಾತಂತ್ರ್ಯದ ಅರ್ಥ ವೈಶಾಲ್ಯತೆಯನ್ನು ವಿವರಿಸಿದರು. ಶಾಲಾ ಸಂಚಾಲಕ ಶೇಂತಾರು ನಾರಾಯಣ ಭಟ್, ಸಹಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸುನೀತಾ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಯತೀಶ್ ಕುಮಾರ್, ಹೆತ್ತವರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಹೆತ್ತವರಿಗೆ ರಸಪ್ರಶ್ನೆ ಸ್ಪರ್ಧೆಯ ಬಳಿಕ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.
ಶಿಕ್ಷಕಿ ಗಾಯತ್ರಿ ಸ್ವಾಗತಿಸಿ, ಜಯಶ್ರೀ ವಂದಿಸಿದರು. ಕುಮಾರಿ ತೇಜಸ್ವಿನಿ ನಿರೂಪಿಸಿದರು.

.jpg)
.jpg)
.jpg)
