ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಮತ್ತು ಪಂಜಾಬ್ ಪ್ರಾಂತ್ಯಗಳ ಮೂರು ನಗರಗಳಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೆಶಾವರ, ಬನ್ನು ಮತ್ತು ಲಾಹೋರ್ ನಗರಗಳಲ್ಲಿ ಸಂಗ್ರಹಿಸಿದ ಮಾದರಿಗಳಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದೆ ಎಂದು ಪಾಕಿಸ್ತಾನದ ಆರೋಗ್ಯ ಸಚಿವಾಲಯ ಹೇಳಿದೆ.





