HEALTH TIPS

ಅಯೋಧ್ಯೆ ದೀಪೋತ್ಸವ: ಭರದಿಂದ ಸಾಗಿದ ದೀಪ ತಯಾರಿಕೆ ಕಾರ್ಯ

 

                ಅಯೋಧ್ಯೆ: ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ಎರಡು ತಿಂಗಳ ಕಾಲ ನಡೆಯುವ ದೀಪೋತ್ಸವಕ್ಕೆ 14 ಲಕ್ಷ ಮಣ್ಣಿನ ದೀಪಗಳಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ದೀಪಗಳ ತಯಾರಿಕೆ ಕಾರ್ಯ ಭರದಿಂದ ಸಾಗಿದೆ.

                      ಉತ್ತರ ಪ್ರದೇಶ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ ದೀಪೋತ್ಸವ ನಡೆಯಲಿದೆ. ಮುಸ್ಸಂಜೆ ವೇಳೆಯಲ್ಲಿ ಜನರು ಸ್ವಯಂಪ್ರೇರಣೆಯಿಂದ ಬಂದು ನದಿಯ ತೀರದುದ್ದಕ್ಕೂ ಮಣ್ಣಿನ ದೀಪಗಳನ್ನು ಬೆಳಗುತ್ತಾರೆ.

                 ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಸಂಪ್ರದಾಯ ಆರಂಭವಾಗಿದೆ. 2017ರಲ್ಲಿ 51,000 ದೀಪಗಳನ್ನು ಬೆಳಗಲಾಗಿತ್ತು. 2019ರಲ್ಲಿ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಿಸಲಾಗಿತ್ತು. ಈ ವರ್ಷ 14 ಲಕ್ಷ ದೀಪಗಳನ್ನು ಬೆಳಗುವ ಮೂಲಕ ಹೊಸ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries