HEALTH TIPS

'ಭಯೋತ್ಪಾದನೆ ವಿರುದ್ಧ ಭಾರತ-ಬಾಂಗ್ಲಾ ಜಂಟಿ ಸಮರ ಸಾರಬೇಕು'

 

              ಕೋಲ್ಕತ್ತ : 'ಭಾರತ ಮತ್ತು ಬಾಂಗ್ಲಾದೇಶ ರಾಷ್ಟ್ರಗಳು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ನಿಕಟ ಬಾಂಧವ್ಯ ವೃದ್ಧಿಯತ್ತ ಹೆಜ್ಜೆ ಇಡಬೇಕು. ಭಯೋತ್ಪಾದನೆ ವಿರುದ್ಧ ಜಂಟಿ ಸಮರ ಸಾರಬೇಕು' ಎಂದು ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಭದ್ರತಾ ವಿಶ್ಲೇಷಕ ಶಂತನು ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

                 ಮಾರಿಷಸ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಶಂತನು, 'ಧರ್ಮದ ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ದ್ವೇಷ ಸೃಷ್ಟಿಸಲು ಬಾಹ್ಯ ಶಕ್ತಿಗಳು ಹವಣಿಸುತ್ತಿರುತ್ತವೆ. ಅಂತಹ ಶಕ್ತಿಗಳಿಂದ ಭಾರತವು ದೂರ ಇರಬೇಕು. ಜೊತೆಗೆ ಅಂತರವನ್ನೂ ಕಾಯ್ದುಕೊಳ್ಳಬೇಕು' ಎಂದು ಸಲಹೆ ನೀಡಿದ್ದಾರೆ.

                ' ಉಭಯ ರಾಷ್ಟ್ರಗಳ ನಾಗರಿಕರ ನಡುವೆ ಹಗೆತನದ ಭಾವನೆ ಸೃಷ್ಟಿಸಲು ಬಾಹ್ಯಶಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ಅಸ್ತ್ರವಾಗಿ ಬಳಸುವ ಸಾಧ್ಯತೆ ಇದೆ. ಈ ಬಗ್ಗೆಯೂ ಎಚ್ಚರಿಕೆಯಿಂದ ಇರಬೇಕು' ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries