HEALTH TIPS

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು

 

             ಹೈದರಾಬಾದ್: ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

           ಪ್ರವಾದಿ ಮುಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆಯ ನಂತರ ರಾಜಾ ಸಿಂಗ್ ಅವರ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ಮತ್ತು ಜನರ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಇಂದು ಅವರನ್ನು ಬಂಧಿಸಿದ್ದರು.

           ಬಂಧನಕ್ಕೊಳಗಾಗಿರುವ ರಾಜಾ ಸಿಂಗ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನಗೊಳಿಸಿದೆ.

               ನೀವು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಇದು ಭಾರತೀಯ ಜನತಾ ಪಕ್ಷದ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಗಳು/ನಿಯೋಜನೆಗಳು ಯಾವುದಾದರೂ ಇದ್ದರೆ ಅದರಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಪ್ರಕಟೆಯಲ್ಲಿ ತಿಳಿಸಿದ್ದಾರೆ.

            ನಿಮ್ಮನ್ನು ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ 10 ದಿನಗಳೊಳಗೆ ಕಾರಣವನ್ನು ನೀಡಬೇಕು ಎಂದು ಪಾಠಕ್ ಅವರು ರಾಜಾ ಸಿಂಗ್ ಗೆ ಸೂಚಿಸಿದ್ದಾರೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries