HEALTH TIPS

ಸೋನಾಲಿ ಸಾವಿನ ಪ್ರಕರಣದಲ್ಲಿ ಇಬ್ಬರ ಆಪ್ತರ ಬಂಧನ: ಮರಣೋತ್ತರ ವರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಯಲು

 

               ಪಣಜಿ: ಬಿಜೆಪಿ ನಾಯಕಿ ಸೊನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಇಬ್ಬರು  ಆಪ್ತರ ವಿರುದ್ಧ ಗುರುವಾರ (ಆ.25) ಪ್ರಕರಣ ದಾಖಲಾದ ಬೆನ್ನಲ್ಲೇ ಇಬ್ಬರೂ ಆರೋಪಿಗಳನ್ನು ಗೋವಾದಲ್ಲಿ ಬಂಧಿಸಲಾಗಿದೆ.

               ಸೋನಾಲಿ ಅವರು ಫ್ರೆಂಡ್ಸ್​ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದರು.

ಕಳೆದ ಸೋಮವಾರ ಅವರು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಅವರ ದೇಹದಲ್ಲಿ ಹಲವಾರು ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವರದಿಯಿಂದ ಗೊತ್ತಾಗಿದೆ. ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ಮರಣೋತ್ತರ ಪರೀಕ್ಷೆ ನಡೆದಿದ್ದು, ದೇಹದ ಮೇಲೆಲ್ಲಾ ಅನೇಕ ಕಡೆಗಳಲ್ಲಿ ಬಲವಾಗಿ ಹೊಡೆದ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸೋನಾಲಿ ಅವರ ಸಾವಿಗೆ ಹೊಸ ತಿರುವು ದೊರೆತಿದೆ.

                ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಸೋನಾಲಿಯ ಇಬ್ಬರು ಸಹಚರರ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.

               ಗೋವಾಕ್ಕೆ ಆಗಸ್ಟ್ 22ರಂದು ಸೋನಾಲಿ ಅವರ ಜತೆ ಆಗಮಿಸಿದ ಸುಧೀರ್ ಸಾಂಗ್ವಾನ್ ಮತ್ತು ಸುಖ್ವಿಂದರ್ ವಾಸಿ ಅವರನ್ನು ಈ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ. ಸೋನಾಲಿ ಸಾವಿನ ಹಿಂದೆ ಬೇರೇನೊ ಸಂಚು ನಡೆದಿದೆ ಎಂದು ಅವರ ಕುಟುಂಬ ಅನುಮಾನ ವ್ಯಕ್ತಪಡಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಗುರುವಾರ ಬೆಳಗ್ಗೆ ಅನುಮತಿ ನಿಡಿತ್ತು. ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿಕೊಂಡರೆ ಮಾತ್ರ ಪರೀಕ್ಷೆಗೆ ಅನುಮತಿ ನೀಡುವುದಾಗಿ ಸೋನಾಲಿ ಅವರ ಸಹೋದರ ಹೇಳಿದ್ದರು.

                                   ಏನಾಗಿತ್ತು?
              ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ಮೊದಲಿಗೆ ನಂಬಲಾಗಿತ್ತು. ಅವರನ್ನು ಉತ್ತರ ಗೋವಾ ಜಿಲ್ಲೆಯ ಅಂಜುನಾ ಪ್ರದೇಶದಲ್ಲಿನ ಸೇಂಟ್ ಆಂಟೋನಿ ಆಸ್ಪತ್ರೆಗೆ ಮಂಗಳವಾರ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು. ಸಾಯುವ ಮುನ್ನ ತನ್ನ ತಾಯಿ, ಸಹೋದರ ಮತ್ತು ಸೋದರ ಮಾವನ ಜತೆ ಮಾತನಾಡಿದ್ದ ಸೋನಾಲಿ, ಸಾಕಷ್ಟು ಆತಂಕದಲ್ಲಿದ್ದರು. ತನ್ನ ಇಬ್ಬರು ಸಹಚರರ ವಿರುದ್ಧ ದೂರಿದ್ದರು ಎಂದು ಅವರ ಸಹೋದರ ರಿಂಕು ಆರೋಪಿಸಿದ್ದಾರೆ.

                              ಬಿಗ್ ಬಾಸ್ ಖ್ಯಾತಿ
              ಟಿಕ್ ಟಾಕ್ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನಾಲಿ ಫೋಗಟ್ ಹರಿಯಾಣದ ಹಿಸಾರ್ ಮೂಲದವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರಿಯಾಣದ ಆದಂಪುರ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಪಡೆದು ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿದ್ದರು. ಅವರು 2020ರಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕೂಡ ಭಾಗವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries