ಮಂಜೇಶ್ವರ: ವಾಮಂಜೂರು ಸರ್ಕಾರಿ ಎಲ್‍ಪಿ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ವಾರ್ಡು ಸದಸ್ಯ ಆದರ್ಶ್ ಬಿ. ಎಂ. ಅವರು ಶಾಲಾ ವಿದ್ಯಾರ್ಥಿಗೆ ಧ್ವಜ ಹಸ್ತಾಂತರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಲ್ವಿಯಾ ಮೊಂತೆರೋ ಧ್ವಜಾರೋಹಣಗೈದರು.
ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಮೀರ್ ಹಂಸ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಾರ್ಡು ಸದಸ್ಯ ಬಿ. ಎಂ. ಆದರ್ಶ್ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಮಂಜೇಶ್ವರ ಉಪಜಿಲ್ಲಾ ಬಿಪಿಒ ವಿಜಯಕುಮಾರ್ ಅವರು 2020-21ನೇ ಶೈಕ್ಷಣಿಕ ವರ್ಷದ ಎಲ್‍ಎಸ್‍ಎಸ್ ಪುರಸ್ಕøತ ಆಯಿಷತ್ ಅಪ್ನಾಳನ್ನು ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಕಿರುಕಾಣಿಕೆ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಭೆಯಲ್ಲಿ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಲೇಖ, ವಿನುತಾ, ಉಪಾಧ್ಯಕ್ಷರಾದ ಸಲಾಂ, ಆರಿಸ್, ಕಾರ್ಯಕಾರಿ ಸಮಿತಿಯ ಸದಸ್ಯರು, ರಕ್ಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದುವು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಲ್ವಿಯಾ ಮೊಂತೆರೋ ಸ್ವಾಗತಿಸಿ, ಸ್ಟಾಫ್ ಕಾರ್ಯದರ್ಶಿ ಸುಬೈದಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.
ವಾಮಂಜೂರು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
0
ಆಗಸ್ಟ್ 19, 2022
Tags

.jpg)
