HEALTH TIPS

ರಾಜಕೀಯ ಪಕ್ಷಗಳು ಜನರಿಗೆ ನೀಡುವ ಉಚಿತ ಕೊಡುಗೆಗಳ ಭರವಸೆ ಗಂಭೀರ ವಿಷಯ: ಸುಪ್ರೀಂ

 

               ನವದೆಹಲಿ: ಚುನಾವಣೆ ಸಂದರ್ಭ ರಾಜಕೀಯ ಪಕ್ಷಗಳು ಜನರಿಗೆ ನೀಡುವ ಉಚಿತ ಕೊಡುಗೆಗಳ ಭರವಸೆ ಮತ್ತು ಅವುಗಳ ವಿತರಣೆ ಗಂಭೀರ ವಿಷಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

                  ಉಚಿತ ಕೊಡುಗೆಗಳನ್ನು ನೀಡುವ ಬದಲು ಆ ಹಣವನ್ನು ಮೂಲ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಬೇಕು ಎಂದು ನ್ಯಾಯಾಲಯ ಹೇಳಿದೆ.

                   ಆರ್ಥಿಕತೆಯಿಂದ ಹಣದ ನಷ್ಟವಾಗುತ್ತಿದೆ ಮತ್ತು ಅದನ್ನು ಜನರ ಕಲ್ಯಾಣಕ್ಕಾಗಿ ಸಮತೋಲನಗೊಳಿಸಬೇಕು ಎಂದು ಕೋರ್ಟ್‌ ಹೇಳಿದೆ.

                 ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಮೂಲಕ ಮತದಾರರಿಗೆರಿಗೆ ಆಮಿಷ ಒಡ್ಡುವುದಕ್ಕೆ ತಡೆ ಹಾಕಬೇಕೆಂದು ಕೋರಿ, ವಕೀಲ ಅಶ್ವಿನಿ ಉಪಾಧ್ಯಾಯ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೀಠವು ನಡೆಸಿತು.

                         ಚುನಾವಣಾ ಪ್ರಣಾಳಿಕೆಯನ್ನು ನಿಯಂತ್ರಿಸಲು ಮತ್ತು ಅದರಲ್ಲಿ ನೀಡಿದ ಭರವಸೆಗಳಿಗೆ ರಾಜಕೀಯ ಪಕ್ಷಗಳನ್ನು ಹೊಣೆಗಾರರನ್ನಾಗಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅರ್ಜಿಯಲ್ಲಿ ಕೇಳಲಾಗಿತ್ತು.

                 'ಇದು ಸಮಸ್ಯೆಯಲ್ಲ ಎಂದು ಯಾರೂ ಹೇಳುವುದಿಲ್ಲ. ಇದು ಗಂಭೀರ ಸಮಸ್ಯೆಯಾಗಿದೆ. ಉಚಿತ ಕೊಡುಗೆಗಳನ್ನು ಪಡೆಯುತ್ತಿರುವವರೂ ಅದನ್ನು ಬಯಸುತ್ತಾರೆ. ಉಚಿತ ಕೊಡುಗೆಗಳ ವಿಚಾರವಾಗಿ ಜನರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕೆಲವರು ಹೇಳಬಹುದು. ಆದರೆ, ಆ ತೆರಿಗೆ ಹಣವನ್ನು ಅಭಿವೃದ್ಧಿ ಪ್ರಕ್ರಿಯೆಗೆ ಬಳಸಬೇಕು. ಆದ್ದರಿಂದ, ಇದು ಗಂಭೀರ ಸಮಸ್ಯೆಯಾಗಿದೆ. ಹಾಗಾಗಿ, ಎರಡೂ ಕಡೆಯವರ ವಾದವನ್ನು ಆಲಿಸಬೇಕು' ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಹೇಳಿದ್ದಾರೆ.

                  ಈ ನಡುವೆ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries