ಪೆರ್ಲ: ಎಣ್ಮಕಜೆ ಪಂಚಾಯಿತಿಯ ಏಳ್ಕಾನ ಹೊಳೆಯಲ್ಲಿ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಏಳ್ಕಾನ ಗುಲಗುಂಜಿ ಎಂಬಲ್ಲಿ ಅಸ್ಥಿಪಂಜರ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಬದಿಯಡ್ಕ ಠಾಣೆ ಪೊಲೀಸರು ಸಥಳಕ್ಕಾಗಮಿಸಿ, ಅಸ್ಥಿಪಂಜರವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
ಇತ್ತೀಚೆಗೆ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಜತೆಗೆ ಅಸ್ಥಿಪಂಜರದ ಡಿಎನ್‍ಎ ತಪಾಸಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಏಳ್ಕಾನ ಹೊಳೆಯಲ್ಲಿ ಮಾನವ ಅಸ್ಥಿಪಂಜರ ಪತ್ತೆ
0
ಆಗಸ್ಟ್ 23, 2022


