HEALTH TIPS

ಮಾತೃಸೇವಾ ಸಂಕಲ್ಪಯಾತ್ರೆ: ದಕ್ಷಿಣಾಮೂರ್ತಿ ಕೃಷ್ಣ ಕುಮಾರ್ ಅವರಿಗೆ ಮುಳಿಯಾರಲ್ಲಿ ಗೌರವಾರ್ಪಣೆ


          ಮುಳ್ಳೇರಿಯ: ದ್ವಿಚಕ್ರ ವಾಹನದ ಮೂಲಕ ತಾಯಿಯೊಂದಿಗೆ ದೇಶದಾದ್ಯಂತ " ಮಾತೃಸೇವಾ ಸಂಕಲ್ಪಯಾತ್ರೆ ಕೈಗೊಂಡಿರುವ ಮೈಸೂರಿನ ದಕ್ಷಿಣಾಮೂರ್ತಿ ಕೃಷ್ಣ ಕುಮಾರ್ ಹಾಗೂ ಇವರ ತಾಯಿ ಚೂಡಾರತ್ನಮ್ಮ ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಒಂದು ದಿನ ಶ್ರೀ ಕ್ಷೇತ್ರದಲ್ಲಿ ತಂಗಿದ್ದು ತಮ್ಮ ಅನುಭವಗಳನ್ನು ಹಂಚಿಕೊಂಡು ಬಳಿಕ ತಮ್ಮ ಯಾತ್ರೆಯನ್ನು ಮುಂದುವರಿಸಿದರು. ಕೃಷ್ಣಕುಮಾರ್ ಮತ್ತವರ ತಾಯಿಯನ್ನು ಶ್ರೀ ಕ್ಷೇತ್ರದಲ್ಲಿ ಸ್ಮರಣಿಕೆ ಮತ್ತು ಪ್ರಸಾದವನ್ನಿತ್ತು ಶಾಲುಹೊದೆಸಿ ಗೌರವಿಸಲಾಯಿತು.
         ಈ ಸಂದರ್ಭದಲ್ಲಿ ಸಂಗೀತ ವಿದುಷಿ ಉμÁ ಈಶ್ವರ ಭಟ್ ಮತ್ತು ವಿದ್ವಾನ್. ಈಶ್ವರ ಭಟ್, ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಉಪಾಧ್ಯಕ್ಷ ಸುರೇಶ ಭಟ್ ಕೊಜಂಬೆ, ಗಿರಿಜಾ ಸುರೇಶ ಭಟ್ ಇವರು ಉಪಸ್ಥಿತರಿದ್ದರು.  ಶ್ರೀ ಕ್ಷೇತ್ರದ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ ಕಾರ್ಯಕ್ರಮ ಸಂಯೋಜನೆ ಮಾಡಿದರು. ಗೋವಿಂದಬಳ್ಳಮೂಲೆ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಅರ್ಚಕ ಅನಂತಪದ್ಮನಾಭ ಮಯ್ಯ ಸಾಂದರ್ಭಿಕ ಸಹಕಾರವನ್ನಿತ್ತರು.    
          ನಲುವತ್ತನಾಲ್ಕು ವರ್ಷದ ದಕ್ಷಿಣಾಮೂರ್ತಿ ಕೃಷ್ಣ ಕುಮಾರ್ ಇವರು ಐ ಟಿ ಉದ್ಯೋಗಿಯಾಗಿದ್ದು ಇದರಿಂದ ಸ್ವಯಂ ನಿವೃತ್ತಿ ಹೊಂದಿ  2018 ರಿಂದ ಮಾತೃ ಸೇವಾ ಸಂಕಲ್ಪ ಯಾತ್ರೆಯನ್ನು ಮಾಡುವ ನಿಟ್ಟಿನಲ್ಲಿ ತನ್ನ ತಂದೆಯವರು ನೀಡಿದ ಬಜಾಜ್ ಚೇತಕ್  ಸ್ಕೂಟರನ್ನು ಈ ಕಾರ್ಯಕ್ಕೆ ಬಳಸುತ್ತಿದ್ದಾರೆ. ಆ ಮೂಲಕ ಯಾತ್ರೆಯಲ್ಲಿ ತಂದೆಯೂ ಒಂದಿಗಿದ್ದಾರೆ ಎಂಬ ಸಂಕಲ್ಪ ಇವರದು.   
         ನಾಲ್ಕು ಗೋಡೆಗಳ ಮಧ್ಯೆ ಅಡುಗೆ ಮನೆಯ ಜಗತ್ತಿನಲ್ಲಿ ತನ್ನ ಕುಟುಂಬದ ಆರೈಕೆಯಲ್ಲಿ ಬದುಕು ಸಾರ್ಥಕ ಮಾಡಿದ ತಾಯಿ ಚೂಡಾರತ್ನಮ್ಮ ಅವರ ಆಸೆಯನ್ನು ಪೂರೈಸಲು ಕೃಷ್ಣ ಕುಮಾರ ಅವರು ಈ ಸಂಕಲ್ಪಯಾತ್ರೆಯನ್ನು ಕೈಗೆತ್ತಿಕೊಂಡಿರುವರು. ಈ ಮೂಲಕ ತಾಯಿಗೆ ಭಾರತ ದರ್ಶನವನ್ನು ಮಾಡಿಸುವ ಸಂಕಲ್ಪಮಾಡಿದ್ದಾರೆ. ಭಾರತದಾದ್ಯಂತ ಪುಣ್ಯಕ್ಷೇತ್ರಗಳು, ಧಾರ್ಮಿಕ ಕೇಂದ್ರಗಳು, ವಿಶೇಷ ಸ್ಥಳಗಳು, ಮೊದಲಾಗಿ ನೇಪಾಳ ಭೂತಾನ್ ಮೇನ್ಮಾರ್, ಚೈನಾ ಗಡಿ  ಮೊದಲಾದ ಸ್ಥಳಗಳಿಗೆ ಈಗಾಗಲೇ ಸುತ್ತಿ ಬಂದಿರುತ್ತಾರೆ. ಇಲ್ಲಿಯ ತನಕ 58302 ಕಿ ಮೀ ಕ್ರಮಿಸಿದ್ದಾರೆ.
         ಊರಿನ ಪ್ರಾದೇಶಿಕ ಪರಿಚಯ ಪಡೆಯಲು ಮತ್ತು ಪ್ರಕೃತಿಯ ಸೊಬಗನ್ನು ಅನುಭವಿಸಲು, ತಾಯಿಯ ಅರೋಗ್ಯ ರಕ್ಷಣೆಯ ಕಾಳಜಿಯಿಂದಲೂ  ಸ್ಕೂಟರಿನಲ್ಲಿ ಬಹಳ ನಿಧಾನವಾಗಿಯೇ ಸಾಗುವುದು ಇಲ್ಲಿ ಗಮನಾರ್ಹ.  ಹಿತಮಿತ ಆಹಾರಪದ್ಧತಿಯನ್ನೂ ರೂಢಿಸಿಕೊಂಡಿರುವ ಕಾರಣ ಅನಾರೋಗ್ಯ ಸಮಸ್ಯೆಯೂ ಇಲ್ಲ ಎನ್ನುತ್ತಾರೆ ಇವರು.
        ತಾಯಿಯ ಆಸೆ ಪೂರೈಸುವುದರಲ್ಲಿಯೇ ಬದುಕು ಸಾರ್ಥಕ. ಇದಕ್ಕಿಂತ ಹೆಚ್ಚಿನ ಭಾಗ್ಯ ಬೇರಿಲ್ಲ ಎನ್ನುತ್ತಾ ಈ ಸಂದೇಶವನ್ನು ಜಗತ್ತಿಗೆ ಪ್ರಕಟಪಡಿಸುತ್ತಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries