ತಿರುವನಂತಪುರ: ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಇಂದು ತಿರುವನಂತಪುರದಲ್ಲಿ ನಡೆಯಲಿದೆ. ಕೋವಳಂನಲ್ಲಿರುವ ಖಾಸಗಿ ಹೋಟೆಲ್‍ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿರುವರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಅಥವಾ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪುದುಚೇರಿಯ ಮುಖ್ಯಮಂತ್ರಿಗಳೂ ಪಾಲ್ಗೊಳ್ಳುವರು. ಲಕ್ಷದ್ವೀಪ ಮತ್ತು ಅಂಡಮಾನ್ ನಿಕೋಬಾರ್‍ನ ಲೆಫ್ಟಿನೆಂಟ್ ಗವರ್ನರ್‍ಗಳನ್ನೂ ವಿಶೇಷವಾಗಿ ಆಹ್ವಾನಿಸಲಾಗಿದೆ.
ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಪರಿಹರಿಸುವುದು ಮತ್ತು ಸಂಬಂಧವನ್ನು ಭದ್ರಗೊಳಿಸುವುದು ಲಕ್ಷ್ಯವೆನ್ನಲಾಗಿದೆ.
ತಿರುವನಂತಪುರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಇಂದು: ಅಮಿತ್ ಶಾ ಮುಖ್ಯ ಅತಿಥಿ
0
ಸೆಪ್ಟೆಂಬರ್ 03, 2022





