ಕಾಸರಗೋಡು: ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಗ್ರಾಹಕರ ಪಡಿತರ ಚೀಟಿಗಳೊಂದಿಗೆ ಆಧಾರ್ ಕಾರ್ಡ್ ಜೋಡಣೆ ಪ್ರಕ್ರಿಯೆ ತೀವ್ರಗೊಳಿಸಲು ತೀರ್ಮಾನಿಸಿದೆ. ಸೆಪ್ಟೆಂಬರ್ 20 ರೊಳಗೆ ಎಲ್ಲಾ ಪಡಿತರ ಚೀಟಿಗಳನ್ನು ಆಧಾರ್‍ನೊಂದಿಗೆ ಲಿಂಕ್ ಮಾಡುವಂತೆ ಸೂಚಿಸಿದೆ.
ಜಿಲ್ಲೆಯಲ್ಲಿ ಪಡಿತರ ಕಾರ್ಡಿಗೆ ಆಧಾರ್ ಲಿಂಕ್‍ಮಾಡಲು ಬಾಕಿಯಿರುವ ಎಲ್ಲಾ ಪಡಿತರ ಗ್ರಾಹಕರು ಈ ಪ್ರಕ್ರಿಯೆ ಪೂರ್ತಿಗೊಳಿಸಬೇಕು. ಆಧಾರ್ ಲಿಂಕ್ ಮಾಡದವರಿಗೆ ಪಡಿತರ ಸಾಮಗ್ರಿ ಪಡೆಯುವಲ್ಲಿ ಸಮಸ್ಯೆ ಎದುರಾಗಬಹುದು ಎಂದು ಜಿಲ್ಲಾ ಸರಬರಾಜು ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಸೂಚನೆ
0
ಸೆಪ್ಟೆಂಬರ್ 15, 2022
Tags





