ಕಾಸರಗೋಡು: ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ಹಾಗೂ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಶ್ರಯದಲ್ಲಿ ಮಕ್ಕಳಿಗಾಗಿ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ನಾಯಮರ್‍ಮೂಲೆ ಮಾದರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಉದ್ಘಾಟಿಸಿದರು.
ಸ್ಪರ್ಧೆಯನ್ನು ನಾಲ್ಕು ವಿಭಾಗಗಳಲ್ಲಿ ನಡೆಸಲಾಯಿತು. ಐದರಿಂದ ಒಂಬತ್ತು ವರ್ಷ ವಯಸ್ಸಿನ ಮಕ್ಕಳು ಬಿಳಿ ಗುಂಪಿನಲ್ಲಿ, 10 ರಿಂದ 15 ವರ್ಷದ ಮಕ್ಕಳು ಹಸಿರು ಗುಂಪಿನಲ್ಲಿ, ಐದರಿಂದ 10 ವರ್ಷ ವಯಸ್ಸಿನ ವಿಕಲಚೇತನ ಮಕ್ಕಳು ಹಳದಿ ಗುಂಪಿನಲ್ಲಿ ಮತ್ತು 11 ರಿಂದ 18 ವರ್ಷ ವಯಸ್ಸಿನ ಮಕ್ಕಳು ಕೆಂಪು ಗುಂಪಿನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಓ.ಎಂ.ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ಶಾಲಾ ಮುಖ್ಯೋಪಾಧ್ಯಾಯ ವಿ.ರವೀಂದ್ರನ್, ರಾಜ್ಯಮಕ್ಕಳ ಕಲ್ಯಾಣ ಸಮಿತಿ ಮೇಲ್ವಿಚಾರಕಿ ಶೀಬಾ, ಶಾಲೆಯ ಆಡಳಿತಾಧಿಕಾರಿ ರಿಷಾ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕಾರ್ಯದರ್ಶಿ ಟಿ.ಎಂ.ಎ.ಕರೀಂ ಸ್ವಾಗತಿಸಿದರು. ಕೋಶಾಧಿಕಾರಿ ಸಿ.ವಿ.ಗಿರೀಶ್ ವಂದಿಸಿದರು.
ಭಾರತೀಯ ಮಕ್ಕಳ ಕಲ್ಯಾಣ ಮಂಡಳಿಯಿಂದ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ
0
ಸೆಪ್ಟೆಂಬರ್ 17, 2022
Tags


