ಕಾಸರಗೋಡು: ಜಿಲ್ಲೆಯಲ್ಲಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಒಟ್ಟು 10,52,258 ಮತದಾರರ ಪೈಕಿ ಕೇವಲ 1,45,023 ಮತದಾರರ ಗುರುತಿನ ಚೀಟಿಯನ್ನು ಆಧಾರ್‍ನೊಂದಿಗೆ ಜೋಡಿಸಲಾಗಿದೆ. ಆಧಾರ್ ಲಿಂಕ್ ಮಾಡುವುದರಿಂದ ಮತದಾರರ ಪಟ್ಟಿಯ ನಕಲು ತಡೆಯಬಹುದು ಮತ್ತು ಮೋಸದ ಮತಗಳನ್ನು ತಡೆಗಟ್ಟಬಹುದು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಬಹುದು ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ ಮತದಾರರು ಈ ಅಭಿಯಾನದಲ್ಲಿ ಭಾಗವಹಿಸಿ ಆಧಾರ್ ಲಿಂಕ್ ಮಾಡಲು ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ಜಾರಿಯಲ್ಲಿರುವ ಆಧಾರ್ ಜೋಡಣೆ ಕಾರ್ಯಕ್ಕೆ ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಆಧಾರ್ ಲಿಂಕ್ ಪ್ರಕ್ರಿಯೆಯನ್ನು ವೇಗಗೊಳಿಸಲು ಎಲ್ಲಾ ಮತಗಟ್ಟೆಗಳಲ್ಲಿ ಸೆಪ್ಟೆಂಬರ್ 25 ರಂದು(ನಿನ್ನೆ)ವಿಶೇಷ ಶಿಬಿರಗಳನ್ನು ಆಯೋಜಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಬಿಎಲ್‍ಒಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲೂ ಜಿಲ್ಲಾ ಮಟ್ಟದ ಸೌಲಭ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ. ತಾಲೂಕು ಕಚೇರಿಗಳು ಮತ್ತು ಗ್ರಾಮ ಕಚೇರಿಗಳಲ್ಲಿ ಸಹಾಯ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಆಧಾರ್ ಕಾರ್ಡ್ ಮತ್ತು ಚುನಾವಣಾ ಗುರುತಿನ ಚೀಟಿಯೊಂದಿಗೆ ಸೌಲಭ್ಯ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದು. ಭಾರತೀಯ ಚುನಾವಣಾ ಆಯೋಗದ ವೆಬ್ ಪೆÇೀರ್ಟಲ್ www.nvsp.in ಮತದಾರರ ಸಹಾಯವಾಣಿ ಮೊಬೈಲ್ ಅಪ್ಲಿಕೇಶನ್, ಆನ್‍ಲೈನ್ ಮತ್ತು ಬೂತ್ ಮಟ್ಟದ ಅಧಿಕಾರಿ ಮೂಲಕ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದು.
ಮತದಾರರ ಪಟ್ಟಿಗೆ ಆಧಾರ್ ಜೋಡಣೆ, ವಿಶೇಷ ಶಿಬಿರ
0
ಸೆಪ್ಟೆಂಬರ್ 25, 2022





