ಬದಿಯಡ್ಕ: ಶ್ರೀಕ್ಷೇತ್ರ ಪೆರಡಾಲ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಸೇವಾ ಸಮಿತಿಯ ಉಪಾಧ್ಯಕ್ಷ ಶಿವ ಪ್ರಸಾದ್ ರೈ ಪೆರಡಾಲ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ವರದಿ, ಲೆಕ್ಕ ಪತ್ರ ಮಂಡನೆ, 2022- 23ರ ಸಾಲಿನ ಮುಂಗಡ ಪತ್ರ ಮಂಡಿಸಲಾಯಿತು. ಮುಂದಿನ ಮೂರು ವರ್ಷದ ಅವಧಿಗೆ ನೂತನ ಸಮಿತಿ ರೂಪೀಕರಿಸಲಾಯಿತು. ಪಾಕಶಾಲೆಯ ಮೇಲ್ಚಾವಣಿ ಕೆಲಸ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಮುಂದೆ ಕ್ಷೇತ್ರದಲ್ಲಿ ನಡೆಯಬೇಕಾದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್, ಸದಸ್ಯರಾದ ಪಿ.ಜಿ. ಜಗನ್ನಾಥ ರೈ, ಕೃಷ್ಣ ಪೆರಡಾಲ, ಜಗದೀಶ ಪೆರಡಾಲ, ಮಾಜಿ ಆಡಳಿತ ಮೊಕ್ತೇಸರರಾದÀ ಟಿ.ಕೆ ನಾರಾಯಣ ಭಟ್, ಪಿ.ಜಿ. ಚಂದ್ರಹಾಸ ರೈ ಮಾತನಾಡಿದರು. ವಾರ್ಡ್ ಸದಸ್ಯ ಶ್ಯಾಮ ಪ್ರಸಾದ್ ಮಾನ್ಯ, ಕೃಷ್ಣಪ್ರಸಾದ್ ರೈ, ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರುμÉೂೀತ್ತಮ ಆಚಾರ್ಯ ಪ್ರಾರ್ಥನೆ ಹಾಡಿದರು. ನೂತನ ಸಮಿತಿಯ ಜತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ವಳಮಲೆ ವಂದಿಸಿದರು.
ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಡಾ.ಐ.ವಿ. ಭಟ್, ಅಧ್ಯಕ್ಷರಾಗಿ ಜಯದೇವ ಖಂಡಿಗೆ, ಉಪಾಧ್ಯಕ್ಷರಾಗಿ ಶಿವಪ್ರಸಾದ್ ರೈ ಪೆರಡಾಲ, ತಿರುಪತಿ ಕುಮಾರ್ ಭಟ್, ಟಿಕೆ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ ರೈ ಪೆರಡಾಲ, ಕಾರ್ಯದರ್ಶಿಯಾಗಿ ಉದಯ ಶಂಕರ್ ಪಿ ಎಸ್, ಪದ್ಮನಾಭ ಶೆಟ್ಟಿ ವಳಮಲೆ, ಕೋಶಾಧಿಕಾರಿಯಾಗಿ ವೆಂಕಟ ಗಿರೀಶ್ ಪಟ್ಟಾಜೆ ಮತ್ತು 21 ಜನರ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

.jpg)
