ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿμÉೀಧದ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೆÇಲೀಸರು ಚರ್ಚೆ ನಡೆಸಿರುವರು.
ಪೆÇಲೀಸ್ ಕೇಂದ್ರ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ರಾಜ್ಯ ಪೆÇಲೀಸ್ ವರಿಷ್ಠ ಅನಿಲ್ ಕಾಂತ್ ಅಧ್ಯಕ್ಷತೆ ವಹಿಸಿದ್ದರು.
ಅಕ್ರಮ ಬಳಕೆಯನ್ನು ತಡೆಗಟ್ಟಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಗಳು ಮತ್ತು ಆಸ್ತಿಗಳಿಗೆ ಸೂಚನೆ ನೀಡಲು ಜಿಲ್ಲಾ ಪೆÇಲೀಸ್ ಮುಖ್ಯಸ್ಥರು ಕ್ರಮಕೈಗೊಳ್ಳುತ್ತಾರೆ. ನಿμÉೀಧಿತ ಸಂಘಟನೆಗೆ ಆರ್ಥಿಕ ನೆರವು ಸಿಗದಂತೆ ತಡೆಯಲು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಈ ಉದ್ದೇಶಕ್ಕಾಗಿ, ಜಿಲ್ಲಾ ಪೆÇಲೀಸ್ ಮುಖ್ಯಸ್ಥರು ಸರ್ಕಾರದ ಆದೇಶದ ಮೂಲಕ ನಿಯೋಜಿಸಲಾದ ಅಧಿಕಾರವನ್ನು ಚಲಾಯಿಸುತ್ತಾರೆ. ಈ ಬಗ್ಗೆ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಈ ಕ್ರಮಗಳನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ, ವಲಯ ಐಜಿಗಳು ಮತ್ತು ವ್ಯಾಪ್ತಿಯ ಡಿಐಜಿಗಳು ಮೇಲ್ವಿಚಾರಣೆ ಮಾಡುತ್ತಾರೆ. ರಾಜ್ಯ ಪೆÇಲೀಸ್ ಮುಖ್ಯಸ್ಥರಿಂದ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಪೆÇಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಡಿಜಿಪಿಗಳು, ಐಜಿಗಳು, ಡಿಐಜಿಗಳು ಮತ್ತು ಜಿಲ್ಲಾ ಪೆÇಲೀಸ್ ಮುಖ್ಯಸ್ಥರು ಭಾಗವಹಿಸಿದ್ದರು.
ಪಾಪ್ಯುಲರ್ ಫ್ರಂಟ್‍ನ ಕಚೇರಿಗಳು ಮತ್ತು ಆಸ್ತಿಗಳ ಮುಟ್ಟುಗೋಲು: ಪೋಲೀಸರಿಂದ ನಿರ್ಣಾಯಕ ಕ್ರಮಕ್ಕೆ ಸಿದ್ಧತೆ
0
ಸೆಪ್ಟೆಂಬರ್ 29, 2022
Tags





