ಕಾಸರಗೋಡು: ಮೂವತ್ತು ವರ್ಷಕ್ಕಿಂತ ಮೇಲ್ಪಟ್ಟ ಜನರ ದೈಹಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ನಿಯಮಿತ ವ್ಯಾಯಾಮದ ಮೂಲಕ ಜೀವನಶೈಲಿ ರೋಗಗಳನ್ನು ದೂರವಿರಿಸುವ ನಿಟ್ಟಿನಲ್ಲಿ ವಾರ್ಷಿಕ ಮಾಸ್ಟರ್ಸ್ ಕ್ರೀಡಾ ಉತ್ಸವವು ಅ. 15ರಂದು ಪಾಲಾವಯಲ್ ಸೈಂಟ್ ಮೇರೀಸ್ ಹೈಯರ್ ಸಎಕೆಂಡರಿ ಶಾಲೆಯಲ್ಲಿ ಜರುಗಲಿರುವುದು.
ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಕ್ರೀಡಾಕೂಟ ಉದ್ಘಾಟಿಸುವರು.
30ರಿಂದ 100 ವರ್ಷ ವರ್ಷ ವಯಸ್ಸಿನವರಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಮಾಜದ ಯಾವುದೇ ವಲಯದಲ್ಲಿ ಪುರುಷರು ಮತ್ತು ಮಹಿಳೆಯರು ಕ್ರೀಡಾಪಟುಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲೆಯಲ್ಲಿ ಗೆದ್ದವರಿಗೆ ರಾಜ್ಯ, ರಾಷ್ಟ್ರ ಹಾಗೂ ಏಷ್ಯನ್ ವಿಶ್ವ ಕೂಟಗಳಲ್ಲಿ ಭಾಗವಹಿಸುವ ಅವಕಾಶವಿದೆ ಎಂದು ಜಿಲ್ಲಾಧ್ಯಕ್ಷ ಡಾ. ಮೆಂಟಲಿನ್ ಮ್ಯಾಥ್ಯೂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾರ್ಯದರ್ಶಿ ಟಿ.ಎಂ.ಮುಹಮ್ಮದ್ ಸಲೀಂ, ಕೋಶಾಧಿಕಾರಿ ಸಿ.ಪದ್ಮನಾಭನ್, ಜತೆ ಕಾರ್ಯದರ್ಶಿ ಕೆ.ಮನೋಜ್ ಕುಮಾರ್ ಉಪಸ್ಥಿತರಿದ್ದರು.
15ರಂದು ಕಾಸರಗೋಡು ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ
0
ಅಕ್ಟೋಬರ್ 13, 2022
Tags




