HEALTH TIPS

ಅ.16 ರಂದು ದೇಶದ ಮೊದಲ MBBS ಹಿಂದಿ ಪಠ್ಯಪುಸ್ತಕ ಬಿಡುಗಡೆಗೊಳಿಸಲಿರುವ ಅಮಿತ್ ಶಾ

                ವದೆಹಲಿ:ಹಿಂದಿ ಭಾಷೆಯಲ್ಲಿ ದೇಶದ ಮೊದಲ ಎಂಬಿಬಿಎಸ್(MBBS) ಪಠ್ಯಪುಸ್ತಕಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯ ಪ್ರದೇಶದಲ್ಲಿ ಅಕ್ಟೋಬರ್ 16 ರಂದು ಬಿಡುಗಡೆಗೊಳಿಸಲಿದ್ದಾರೆ. ಶಿಕ್ಷಣವನ್ನು ಸುಲಭಗೊಳಿಸುವ ಮಧ್ಯ ಪ್ರದೇಶ ಸರಕಾರದ ಕಾರ್ಯಕ್ರಮದ ಅಂಗವಾಗಿ ಉನ್ನತ ಶಿಕ್ಷಣ ವಿಷಯಗಳನ್ನು ಹಿಂದಿಯಲ್ಲಿ ಕಲಿಸುವ ಉದ್ದೇಶವನ್ನು ಹೊಂದಲಾಗಿದೆ.

               ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಮೂರು ಎಂಬಿಬಿಎಸ್ ಪಠ್ಯ ಪುಸ್ತಕಗಳನ್ನು ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಬಿಡುಗಡೆಗೊಳಿಸಲಿದ್ದಾರೆ. ಈ ಪುಸ್ತಕಗಳಲ್ಲಿ ವೈಜ್ಞಾನಿಕ ಮತ್ತು ಜೀವಶಾಸ್ತ್ರ ಸಂಬಂಧಿ ಪದಗಳನ್ನು ದೇವನಾಗರಿ ಲಿಪಿಯಲ್ಲಿ ಹಾಗೂ ವಿವರಣೆಗಳನ್ನು ಹಿಂದಿಯಲ್ಲಿ ಕೊಡಲಾಗಿದೆ.

                "ಈ ಪಠ್ಯಪುಸ್ತಕಗಳು ಒಂದು ರೀತಿಯಲ್ಲಿ ದೇವನಾಗರಿ ಲಿಪಿಯಲ್ಲಿ ಹಿಂಗ್ಲಿಷ್‍ನಲ್ಲಿದ್ದಂತೆ,'' ಎಂದು ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.

                 ಹಿಂದಿ ಭಾಷಿಕರ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ ಮತ್ತು ಗುಜರಾತ್‍ನಲ್ಲಿ ಉನ್ನತ ಶಿಕ್ಷಣವನ್ನು ಹಿಂದಿ ಮಾಧ್ಯಮದಲ್ಲಿ ನೀಡುವ ಕುರಿತು ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಶಿಫಾರಸು ಮಾಡಿತ್ತು. ಹಿಂದಿಯೇತರ ರಾಜ್ಯಗಳಾದ ತಮಿಳುನಾಡಿನಲ್ಲಿ ಆಯಾ ರಾಜ್ಯಗಳ ಅಧಿಕೃತ ಭಾಷೆಗಳಲ್ಲಿ ಶಿಕ್ಷಣಕ್ಕೆ ಶಿಫಾರಸು ಮಾಡಲಾಗಿತ್ತು.

                ಮಧ್ಯ ಪ್ರದೇಶದಲ್ಲಿ ವೈದ್ಯಕೀಯ ಕೋರ್ಸಿನ ಹಿಂದಿ ಪಠ್ಯಪುಸ್ತಕಗಳನ್ನು ಇದೇ ಶೈಕ್ಷಣಿಕ ವರ್ಷಕ್ಕಾಗಿ ಬಿಡುಗಡೆಗೊಳಿಸಲಾಗುವುದು. ಹೀಗೆ ಈ ಪಠ್ಯದ ಆಧಾರದಲ್ಲಿ ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲಾಗುವ ಪದವಿ ಪ್ರಮಾಣಪತ್ರಗಳಲ್ಲಿ ಅವರ ಶಿಕ್ಷಣ ಮಾಧ್ಯಮವನ್ನು ಉಲ್ಲೇಖಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

               ಈ ಹಿಂದೆ ಮಧ್ಯ ಪ್ರದೇಶದಲ್ಲಿ ಇಂಜಿನಿಯರಿಂಗ್ ಕೋರ್ಸುಗಳಿಗೆ ಹಿಂದಿ ಪಠ್ಯಪುಸ್ತಕ ಜಾರಿಗೊಳಿಸುವ ವಿಫಲ ಯತ್ನಗಳು ನಡೆದಿದ್ದವು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries