HEALTH TIPS

ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

 

       ನವದೆಹಲಿ: ಕೇಂದ್ರ ಸರ್ಕಾರ ಗೋಧಿ ಸೇರಿದಂತೆ ಪ್ರಮುಖ 6 ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ.

          ಈ ಋತುವಿನಲ್ಲಿ ಕೇಂದ್ರ ಸರ್ಕಾರ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಒಟ್ಟು 23 ಬೆಳೆಗಳಿಗೆ ಬೆಂಬಲ ಘೋಷಣೆ ಮಾಡಿದ್ದು ರೈತರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

                ಗೋಧಿಗೆ ₹110 ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಗೋಧಿಗೆ ₹ 2,125 ಬೆಂಬಲ ಬೆಲೆ ಸಿಗಲಿದೆ. ಗೋಧಿ ಉತ್ಪಾದನಾ ವೆಚ್ಚವನ್ನು ಪ್ರತಿ ಕ್ವಿಂಟಲ್‌ಗೆ ₹ 1,065 ರೂ ಎಂದು ಅಂದಾಜಿಸಿ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಠಾಕೂರ್‌ ಹೇಳಿದ್ದಾರೆ.

                 2023-24 ಮಾರುಕಟ್ಟೆ ಋತುವಿಗಾಗಿ ಪ್ರಮುಖ 6 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

               ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಂತರ ಕೇಂದ್ರದ ನಿರ್ಧಾರಗಳ ಬಗ್ಗೆ ಠಾಕೂರ್‌ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

            ಗೋಧಿಗೆ ₹110, ಬಾರ್ಲಿ ₹100, ಬೇಳೆ ₹105, ಮಸೂರ್ (ಬೆಳೆ) ₹500, ಸಾಸಿವೆ ₹400, ಸೂರ್ಯಕಾಂತಿಗೆ ₹209 ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries