ಕಾಸರಗೋಡು: ನವರಾತ್ರಿ ಉತ್ಸವದ ವಿಜಯದಶಮಿ ಅಂಗವಾಗಿ ವಿವಿಧೆಡೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾಸರಗೋಡಿನ ಕೊರಕ್ಕೋಡು ಶ್ರೀ ಆರ್ಯಕಾತ್ರ್ಯಾಯಿನಿ ಮಹಾದೇವಿ ದೇವಸ್ಥಾನ, ಅಣಂಗೂರು ಶ್ರೀ ಶಾರದಾಂಬಾ ಭಜನಾ ಮಂದಿರ, ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ, ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಚಟ್ಟಂಚಾಲ್ ಶ್ರೀ ಮಹಿಷಮರ್ದಿನೀ ದೇವಸ್ಥಾನ, ಕೊರಕ್ಕೋಡು ಶ್ರೀ ದುರ್ಗಾಪರಮೇಶ್ವರೀ ಮಹಾಕಾಳಿ ಕಾಶೀಕಾಳಭೈರವೇಶ್ವರ ದೇವಸ್ಥಾನ, ಪಿಲಿಕುಂಜೆ ಶ್ರೀ ಜಗದಂಬಾ ದೇವಸ್ಥಾನ, ಕೊರಕ್ಕೋಡು ಶ್ರೀ ದುರ್ಗಾಪರಮೇಶ್ವರೀ ಸಉಬ್ರಹ್ಮಣ್ಯ ದಏವಸ್ಥಾನ, ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ತೈರೆ ಶ್ರೀ ದಉರ್ಗಾಪರಮೇಶ್ವರೀ ದೇವಸ್ಥಾನ, ಮುಂಡೋಳು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸೇರಿದಂತೆ ನಾಡಿನಾದ್ಯಂತ ವಿವಿಧ ದೇವಾಲಯಗಳಲ್ಲಿ ಎಳೆಯ ಮಕ್ಕಳಿಗೆ ವಿದ್ಯಾರಂಭದ ಮೊದಲ ಅಕ್ಷರಾಭ್ಯಾಸ ನಡೆಸಿಕೊಡಲಾಯಿತು.
ಫೋಟೋ : ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು.


