HEALTH TIPS

ಯುಸಿಸಿ: ಎಲ್ಲ ಪಿಐಎಲ್‌ ವಜಾಗೊಳಿಸಲು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಮನವಿ

 

                ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

                ಈ ಕುರಿತು ಸುಪ್ರೀಂಕೋರ್ಟ್‌ಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಸರ್ಕಾರ, 'ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೇ, ಬೇಡವೇ ಎಂಬುದು ನೀತಿ ನಿರೂಪಣೆಗೆ ಸಂಬಂಧಿಸಿದ್ದು. ಈ ವಿಷಯದಲ್ಲಿ ಸಂಸತ್‌ಗೆ ಕೋರ್ಟ್‌ ಯಾವುದೇ ನಿರ್ದೇಶನ ನೀಡುವಂತಿಲ್ಲ' ಎಂದು ತಿಳಿಸಿದೆ.

                      'ನಾಗರಿಕರು ಬೇರೆ ಬೇರೆ ಕಾನೂನುಗಳನ್ನು ಪಾಲನೆ ಮಾಡುವುದು, ದೇಶದ ಏಕತೆಗೆ ಅಗೌರವ ತೋರಿದಂತೆ' ಎಂದೂ ಕೇಂದ್ರ ಹೇಳಿದೆ.

                    'ಕಾನೂನು ರಚಿಸುವುದು ಸಂಸತ್‌ನ ಪರಮಾಧಿಕಾರ. ಈ ಅಂಶವನ್ನು ಸುಪ್ರೀಂಕೋರ್ಟ್‌ ನೀಡಿರುವ ಹಲವಾರು ತೀರ್ಪುಗಳಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಈ ವಿಷಯ ಕುರಿತು ಕಾನೂನು ಆಯೋಗವು ವರದಿಯೊಂದನ್ನು ಸಲ್ಲಿಸಲಿದೆ. ವರದಿಯನ್ನು ಪ‍ರಿಶೀಲಿಸಿದ ನಂತರ, ಸರ್ಕಾರ ಕ್ರಮ ಕೈಗೊಳ್ಳುವುದು' ಎಂದು ಕೇಂದ್ರ ಸರ್ಕಾರ ಹೇಳಿದೆ.

                 ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಕೋರಿ ವಕೀಲ ಹಾಗೂ ಬಿಜೆಪಿ ಮುಖಂಡ ಅಶ್ವಿನಿಕುಮಾರ್‌ ಅವರು ಪಿಐಎಲ್‌ ಸಲ್ಲಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries