ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ ನೇತೃತ್ವದಲ್ಲಿ ನವಕೇರಳ ಕ್ರಿಯಾ ಯೋಜನೆಯ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಜಲಾನಯನ ಆಧಾರಿತ ಮಾಸ್ಟರ್ ಪ್ಲಾನ್ ರಚನಾ ಕಾರ್ಯಾಗಾರವನ್ನು ನಡೆಸಲಾಯಿತು.
ಬೋವಿಕ್ಕಾನ ಸೌಪರ್ಣಿಕಾ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಶಾಸಕ ಸಿ.ಎಚ್.ಕುಂಞಂಬು ಉದ್ಘಾಟಿಸಿದರು. ಕಾರಡ್ಕ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಸಿ.ಜಿ.ಮ್ಯಾಥ್ಯೂ ಅಧ್ಯಕ್ಷತೆ ವಹಿಸಿದ್ದರು. ಮಣ್ಣು, ನೀರು ಮತ್ತು ಜೈವಿಕ ಸಂಪನ್ಮೂಲಗಳ ನಡುವಿನ ನೈಸರ್ಗಿಕ ಜೈವಿಕ ಸಂಬಂಧವನ್ನು ಕಾಪಾಡಿಕೊಳ್ಳಲು ಮತ್ತು ಮಣ್ಣಿನಲ್ಲಿ ಜೈವಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಅನುμÁ್ಠನಗೊಳಿಸುವುದು ಯೋಜನೆಯ ಉದ್ದೇಶವಾಗಿದೆ.
ಸಿಪಿಸಿಆರ್‍ಐ ಪ್ರಧಾನ ವಿಜ್ಞಾನಿ ಸಿ.ತಂಬಾನ್, ಜಿಲ್ಲಾ ಜಂಟಿ ಕಾರ್ಯಕ್ರಮ ಸಂಯೋಜಕ ಕೆ.ಪ್ರದೀಪನ್ ಮತ್ತು ನವಕೇರಳಂ ಜಿಲ್ಲಾ ಸಂಯೋಜಕ ಕೆ.ಬಾಲಕೃಷ್ಣನ್ ತರಗತಿ ನಡೆಸಿದರು. ವಿವಿಧ ಪಂಚಾಯಿತಿ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಬ್ಲಾಕ್ ಪಂಚಾಯಿತಿ ಸದಸ್ಯರು, ಯೋಜನಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಕಾರ್ಯದರ್ಶಿಗಳು, ವಿಇಒಗಳು, ಎನ್ ಆರ್ ಇಜಿಎಸ್ ಅಧಿಕಾರಿಗಳು ಮೊದಲಾದವರು ಭಾಗವಹಿಸಿದ್ದರು. ಬ್ಲಾಕ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ.ನಾರಾಯಣನ್ ಸ್ವಾಗತಿಸಿ, ಕಾರ್ಯದರ್ಶಿ ಕೆ.ಮೃದುಲಾ ವಂದಿಸಿದರು.

.jpeg)
.jpeg)
