HEALTH TIPS

ನ್ಯಾಯಾಂಗವಿಲ್ಲದೆ ಪ್ರಜಾಪ್ರಭುತ್ವವಿಲ್ಲ-ಹೈಕೋರ್ಟ್ ನ್ಯಾಯಮೂರ್ತಿ ದೇವನ್ ರಾಮಚಂದ್ರನ್



           ಕಾಸರಗೊಡು: ನ್ಯಾಯಾಂಗವಿಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ತಿಳಿಸಿದ್ದಾರೆ. ಅವರು  ಶನಿವಾರ ಹೊಸದುರ್ಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಿರುವ ಭೂಮಿ ಹಸ್ತಾಂತರಿಸುವ ಸಮಾರಂಭ ಮತ್ತು ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
             ಈ ಸಂದರ್ಭ ನವೀಕೃತ ಕಟ್ಟಡದಲ್ಲಿ ಆರಂಭಗೊಂಡ ಕೌಟುಂಬಿಕ ನ್ಯಾಯಾಲಯ ಮತ್ತು ಎಂಎಸಿಟಿ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭ ವಿದ್ಯಾರ್ಥಿ ಪೆÇಲೀಸ್ ಕೆಡೆಟ್‍ಗಳ ಬಗ್ಗೆ ಮೆಚ್ಚುಗೆ ಸೂಚಿಸಿದ ಅವರು ಸ್ಟೂಡೆಂಟ್ ಪೊಲೀಸ್ ಕ್ಯಾಡೆಟ್‍ಗಳ ಶಿಸ್ತು, ಮುಂದಿನ ತಲೆಮಾರಿಗೆ ಆದರ್ಶವಾಗಬೇಕು ಎಂದು ತಿಳಿಸಿದರು.  ಕಳೆದ 30 ವರ್ಷಗಳಲ್ಲಿ ನ್ಯಾಯಾಲಯಗಳ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿಲ್ಲ. ಈ ಇತಿಮಿತಿಗಳ ಹೊರತಾಗಿಯೂ, ನ್ಯಾಯಾಂಗವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಆಶಾದಾಯಕ. ಹೊಜದುರ್ಗ ನ್ಯಾಯಾಲಯಕ್ಕೆ 10 ಕೋಟಿ ಮೀಸಲಿಡಲಾಗಿದೆ ಎಂಬುದಾಗಿ ಸ್ಥಳೀಯ ಶಾಸಕರು ಮಾಹಿತಿ ನೀಡಿದ್ದು, ಭವಿಷ್ಯದಲ್ಲಿ ಹೊಸ ಕಟ್ಟಡ ಶೀಘ್ರ ನಿರ್ಮಾಣವಾಗಲಿ ಎಂದು ತಿಳಿಸಿದರು.
           ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡ್ ಸಬ್ ಕಲೆಕ್ಟರ್ ಸುಫಿಯಾನ್ ಅಹ್ಮದ್ ಅವರು ಭೂಮಿ ಹಸ್ತಾಂತರದ ಅಧಿಕೃತ ಘೋಷಣೆ ಮಾಡಿದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಭಾಷಣ ಮಾಡಿದರು. ಶಾಸಕ ಇ.ಚಂದ್ರಶೇಖರನ್, ಪೆÇೀಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ವೈಭವ್ ಸಕ್ಸೇನಾ, ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ, ಕುಟುಂಬ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಕೆ.ರಮೇಶ್ ಕುಮಾರ್, ಜಿಲ್ಲಾ ಸರ್ಕಾರಿ ಅಭಿಯೋಜಕ .ಪಿ. ದಿನೇಶ್ ಕುಮಾರ್, ವಕೀಲರಾದಎಂ.ಸಿ.ಜೋಸ್, ಪಿ.ಅಪ್ಪುಕುಟ್ಟನ್, ಎಂ.ಸಿ.ಕುಮಾರನ್, ಕಾಸರಗೋಡು ವಕೀಲರ ಸಂಘದ ಅಧ್ಯಕ್ಷ ಎಂ. ನಾರಾಯಣಭಟ್,  ಪಿ.ಕೆ.ಚಂದ್ರಶೇಖರನ್ ಮತ್ತು ರಾಮಚಂದ್ರನ್ ಕಟ್ಟೂರ್ ಉಪಸ್ಥಿತರಿದ್ದರು.  ಹೊಸದುರ್ಗ ವಕೀಲರ ಸಂಘದ ಅಧ್ಯಕ್ಷ ಅ. ಎ.ರಾಜಮೋಹನನ್ ಸ್ವಾಗತಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಪಿ.ಕೆ.ಸತೀಶ ವಂದಿಸಿದರು.
          ಕಾಞಂಗಾಡ್‍ನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಹೊಜದುರ್ಗ ನ್ಯಾಯಾಲಯದ ಬಳಿ 1.45 ಎಕರೆ ಜಾಗವನ್ನು ಕಂದಾಯ ಇಲಾಖೆಯು ನ್ಯಾಯಾಂಗ ಇಲಾಖೆಗೆ ಹಸ್ತಾಂತರಿಸಿದೆ.  ಪ್ರಸ್ತುತ, ಕಾಞಂಗಾಡ್ ಪೆÇೀಕ್ಸೊ ವಿಶೇಷ ನ್ಯಾಯಾಲಯ, ಉಪ-ನ್ಯಾಯಾಲಯ, ಎರಡು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮುನ್ಸೀಫ್ ನ್ಯಾಯಾಲಯ, ಮೋಟಾರು ಅಪಘಾತಗಳ ಹಕ್ಕುಗಳ ನ್ಯಾಯಮಂಡಳಿ (ಎಂಎಸಿಟಿ) ಮತ್ತು ಕೌಟುಂಬಿಕ ನ್ಯಾಯಾಲಯಗಳು ಕಾಂಗಾಡಿನಲ್ಲಿ ಕಾರ್ಯಾಚರಿಸುತ್ತಿದೆ.




 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries