ಕಾಸರಗೋಡು: ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಅಂಗವಾಗಿ ಪತ್ರಕರ್ತರು ಮತ್ತು ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಭಾಷಣ ಮತ್ತು ಸುದ್ದಿ ಬರವಣಿಗೆ ಸ್ಪರ್ಧೆ ನ.16 ರಂದು ಕಾಸರಗೋಡು ಸಇವಿಲ್‍ಸ್ಟೇಶನ್‍ನಲ್ಲಿರುವ ಜಿಲ್ಲಾ ಮಾಹಿತಿ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾಹಿತಿ ಕಛೇರಿ ಕಾಸರಗೋಡು ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಮಾಧ್ಯಮ ಪ್ರತಿನಿಧಿಗಳಿಗೆ, ಜಿಲ್ಲೆಯಲ್ಲಿ ಪತ್ರಿಕೋದ್ಯಮ ಓದುತ್ತಿರುವ ಮಾಧ್ಯಮ ವಿದ್ಯಾರ್ಥಿಗಳು ಭಾಷಣ ಸ್ಪರ್ಧೆ ಮತ್ತು ಸುದ್ದಿ ಬರವಣಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸುದ್ದಿ ಬರವಣಿಗೆ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಾಲೇಜಿನ ಪ್ರಾಂಶುಪಾಲರು ನೀಡುವ ಗುರುತಿನ ಚೀಟಿ ಯಾ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಭಾಗವಹಿಸಲು ಇಚ್ಛಿಸುವವರು ದೂರವಾಣಿ ಸಂಖ್ಯೆ(04994255145) ಇಮೇಲ್(ಜioಞsgಜ@gmಚಿiಟ.ಛಿom )ಮೂಲಕ ಹೆಸರು ನೋಂದಯಿಸಬಹುದಗಿದೆ. ವಿಜೇತರಿಗೆ ಬಹುಮಾನ ವಿತರಿಸಲಾಗುವುದು.
ರಾಷ್ಟ್ರೀಯ ಮಾಧ್ಯಮ ದಿನಾಚರಣೆ: ನಾಳೆ ಭಾಷಣ ಮತ್ತು ಸುದ್ದಿ ಬರವಣಿಗೆ ಸ್ಪರ್ಧೆ
0
ನವೆಂಬರ್ 14, 2022



