ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ 61ನೇ ಕುಂಬಳೆ ಉಪಜಿಲ್ಲಾ ಶಾಲಾಕಲೋತ್ಸವದಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಕಿರಿಯ ಪ್ರಾಥಮಿಕ ಜನರಲ್‍ನಲ್ಲಿ 3ನೇ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಂಸ್ಕøತದಲ್ಲಿ 4ನೇ ಸ್ಥಾನ, ಹೈಸ್ಕೂಲ್ ಸಂಸ್ಕøತದಲ್ಲಿ 3ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಹಿರಿಯ ಪ್ರಾಥಮಿಕ ವಿಭಾಗದಲ್ಲಿ 7ಮಂದಿ ಹಾಗೂ ಹೈಸ್ಕೂಲ್ ವಿಭಾಗದಲ್ಲಿ 10 ಮಂದಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ, ಆಡಳಿತ ಮಂಡಳಿ ಅಭಿನಂದನೆಯನ್ನು ಸಲ್ಲಿಸಿದೆ.
ಶಾಲಾ ಕಲೋತ್ಸವದಲ್ಲಿ ಬದಿಯಡ್ಕ ವಿದ್ಯಾಪೀಠದ ಸಾಧನೆ
0
ನವೆಂಬರ್ 29, 2022
Tags




.jpg)
