ಕುಂಬಳೆ: ಕರ್ನಾಟಕ ಇತಿಹಾಸ ಅಧ್ಯಯನ, ಕನ್ನಡ ಸಂಸ್ಕøತಿ, ಸಾಹಿತ್ಯ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತ ಕ್ರಿಯಾಶೀಲವಾಗಿರುವ ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು ಇದರ ಕೇರಳ ಘಟಕ ಅಸ್ತಿತ್ವಕ್ಕೆ ಬಂದಿದೆ. ಕೇರಳ ರಾಜ್ಯ ಘಟಕಕ್ಕೆ ಪ್ರಥಮ ಅಧ್ಯಕ್ಷರಾಗಿ ಧಾರ್ಮಿಕ, ಸಾಮಾಜಿಕ ಮುಖಂಡ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅವರನ್ನು ನೇಮಿಸಿ ಕೇಂದ್ರ ಸಮಿತಿ ಅಧ್ಯಕ್ಷ ಡಾ.ದೇವರಕೊಂಡ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಜೊತೆಗೆ ಕಾರ್ಯದರ್ಶಿಯಾಗಿ ವಾಮನ ರಾವ್ ಬೇಕಲ್ ಅವರನ್ನು ಆಯ್ಕೆಮಾಡಲಾಗಿದೆ.
ನೂತನ ಕೇರಳ ಘಟಕದ ಉದ್ಘಾಟನೆ ಶೀಘ್ರ ನಡೆಯಲಿದೆ ಎಂದು ಪ್ರಭಾಕರ ಕಲ್ಲೂರಾಯ ಬನದಗದ್ದೆ ತಿಳಿಸಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿ ಕೇರಳ ಘಟಕ ಅಸ್ತಿತ್ವಕ್ಕೆ: ಅಧ್ಯಕ್ಷರ ಆಯ್ಕೆ
0
ನವೆಂಬರ್ 04, 2022


