ಕಾಸರಗೋಡು: ಮಕ್ಕಳ ಕಲ್ಯಾಣ ಸಮಿತಿ ಕಾಸರಗೋಡು ಜಿಲ್ಲಾ ಘಟಕ ವತಿಯಿಂದ ಮಕ್ಕಳ ದಿನಾಚರಣೆಯನ್ನು ನ. 14ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.
ವಿದ್ಯಾನಗರ ಕ್ರೀಡಾಂಗಣದ ಬಳಿ ಇರುವ ಸನ್‍ರೈಸ್ ಆಡಿಟೋರಿಯಂನಲ್ಲಿ ವಿದ್ಯಾರ್ಥಿಗಳ ಸಾರ್ವಜನಿಕ ಸಭೆ ನಡೆಯಲಿದೆ. ಬಿ.ಸಿ. ರೋಡ್ ಜಂಕ್ಷನ್‍ನಿಂದ ಆರಂಭಗೊಂಡು ಸಮ್ಮೇಳನ ಸ್ಥಳದ ವರೆಗೆ ನಡೆಯುವುದು. ಮಕ್ಕಳ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗುವ ವಿದ್ಯಾರ್ಥಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಶಾಸಕ ಎನ್.ಎ.ನೆಲಿಕುಣಿ ಮಕ್ಕಳ ದಿನಾಚರಣೆಯ ಸಂದೇಶ ಬೋಧಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ದಂಡಾರಿ ಸ್ವಾಗತ ರಣವೀರ್‍ಚಂದ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ನ. 5ರಂದು ಪಾಲಕುನ್ನು ಅಂಬಿಕಾ ಕಾಳೇಜಿನಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿರುವುದು. ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜಿ ಸ್ಪರ್ಧೆಗಳನ್ನು ಉದ್ಘಾಟಿಸುವರು.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ ರಣವೀರ್‍ಚಂದ್ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಟಿ.ಎಂ.ಎ.ಕರೀಂ ವರದಿ ಮಂಡಿಸಿದರು. ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಕಾರ್ಯಕಾರಿ ಸದಸ್ಯ ಓ.ಎಂ.ಬಾಲಕೃಷ್ಣನ್, ಜಿಲ್ಲಾ ವಾರ್ತಾ ಅಧಿಕಾರಿ ಎಂ.ಮಧುಸೂದನನ್, ಸಾಮಾಜಿಕ ನ್ಯಾಯ ಜಿಲ್ಲಾ ಅಧಿಕಾರಿ ಶೀಬಾ ಮುಮ್ತಾಜ್, ಸಿ.ವಿ.ಗಿರೀಶನ್, ಜಯನ್ ಕಟಕಂ, ಎಂ.ವಿ.ನಾರಾಯಣನ್ ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ: ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನ
0
ನವೆಂಬರ್ 04, 2022
Tags

