HEALTH TIPS

ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ, ನೀವು ನಮಗೆ ಮತ ನೀಡಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

 

            ಬಿಲಾಸ್‌ಪುರ: ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಆರೋಗ್ಯದ ಮೂಲ ಹಕ್ಕನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ನಾವು ನಿಮಗೆ ಕೋವಿಡ್ ಲಸಿಕೆ ನೀಡಿದ್ದೇವೆ. ನೀವು ನಮಗೆ ಮತ ನೀಡಿ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬುಧವಾರ ಹೇಳಿದ್ದಾರೆ.

                 ಬಿಲಾಸ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತನಾಡಿದ ಜೆಪಿ ನಡ್ಡಾ, “ಪ್ರಧಾನಿ ಮೋದಿಜಿ ಒಂಬತ್ತು ತಿಂಗಳೊಳಗೆ ದೇಶದಲ್ಲಿಯೇ ಎರಡು ಲಸಿಕೆಗಳನ್ನು ತಯಾರಿಸಿದರು ಮತ್ತು ನಿಮ್ಮೆಲ್ಲರಿಗೂ ಡಬಲ್ ಡೋಸ್ ಮತ್ತು ಬೂಸ್ಟರ್ ಡೋಸ್ ಹಾಕಿ ರಕ್ಷಿಸಿದ್ದಾರೆ. ನಿಮ್ಮನ್ನು ರಕ್ಷಿಸಿದ ಪಕ್ಷವನ್ನು ರಕ್ಷಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.

             ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ 'ವಿಷನ್ ಡಾಕ್ಯುಮೆಂಟ್'(ಪ್ರಣಾಳಿಕೆ) ಅನ್ನು ಶುಕ್ರವಾರ ಜೆಪಿ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ.  ಜೆಪಿ ನಡ್ಡಾ ಅವರು ನವೆಂಬರ್ 4 ರಂದು ಶಿಮ್ಲಾದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ಮತ್ತು 9 ರಂದು ಕನಿಷ್ಠ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

                 68 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 12 ರಂದು ಚುನಾವಣೆ ನಿಗದಿಯಾಗಿದೆ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries