HEALTH TIPS

ಕ್ವಾರಂಟೈನ್‌ ಪೂರ್ಣಗೊಳಿಸಿದ ಎರಡು ಚೀತಾಗಳು ವಿಶಾಲ ಅರಣ್ಯ ಪ್ರದೇಶಕ್ಕೆ ಬಿಡುಗಡೆ

 

               ನವದೆಹಲಿ: ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿರುವ ಎಲ್ಲಾ ಎಂಟು ಚೀತಾಗಳು ಆರೋಗ್ಯಕರ ಮತ್ತು ಸಕ್ರಿಯವಾಗಿದ್ದು, ಈ ಪರಿಸರಕ್ಕೆ ಹೊಂದಿಕೊಳ್ಳುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ.

                  ಸೆಪ್ಟೆಂಬರ್ ಮಧ್ಯಭಾಗದಲ್ಲಿ ನಮೀಬಿಯಾದಿಂದ ತಂದಿದ್ದ ಅವುಗಳನ್ನು ಇರಿಸಲಾಗಿದ್ದ ಕ್ವಾರಂಟೈನ್ ಪ್ರದೇಶದಿಂದ ಎರಡು ಚೀತಾಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಿರುವುದು ಒಳ್ಳೆಯ ಸುದ್ದಿ ಎಂದು ಅವರು ಬಣ್ಣಿಸಿದ್ದಾರೆ.

                   'ಒಳ್ಳೆಯ ಸುದ್ದಿ. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಎರಡು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ. ಉಳಿದವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು' ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಎರಡು ಚೀತಾಗಳ ವಿಡಿಯೊ ಹಂಚಿಕೊಂಡಿದ್ದಾರೆ.

                  ಸೆ.17ರಂದು ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries