HEALTH TIPS

ಬೆತ್ತಲೆ ವಿಡಿಯೋ ಹರಿಬಿಡುವುದಾಗಿ ಬೆದರಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: ಪೊಲೀಸ್​ ಅಧಿಕಾರಿಯ ಬಂಧನ

 

              ತಿರುವನಂತಪುರಂ: ಬೆತ್ತಲೆ ವಿಡಿಯೋ ರೆಕಾರ್ಡ್​ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಏಳು ವರ್ಷಗಳ ಕಾಲ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೊಲೀಸ್​ ಅಧಿಕಾರಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

                ಬಂಧಿತ ಆರೋಪಿಯನ್ನು ಕಚನಿ ಮೂಲದ ಸಬು ಪನಿಕ್ಕರ್​ (48) ಎಂದು ಗುರುತಿಸಲಾಗಿದೆ. ಈತ ಕೇರಳದ ವಿಜಿಲೆನ್ಸ್ ಗ್ರೇಡ್​ ಎಸ್​ಸಿಪಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಅರುವಿಕ್ಕರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

               ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಮಹಿಳೆಯ ಬೆತ್ತಲೆ ವಿಡಿಯೋವನ್ನು ಆರೋಪಿ ರೆಕಾರ್ಡ್​ ಮಾಡಿಟ್ಟುಕೊಂಡಿದ್ದ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆಂದು ಹೆದರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸುಮಾರು 7 ವರ್ಷಗಳ ಕಾಲ ಮಹಿಳೆಯನ್ನು ಆರೋಪಿ ತನ್ನ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿದ್ದಾನೆ.

               ಆರೋಪಿ ವಿಡಿಯೋ ಕ್ಲಿಪ್ ಅನ್ನು ಹರಿಬಿಟ್ಟ ಬಳಿಕ ಮಹಿಳೆ ಇತ್ತೀಚೆಗೆ ಅರುವಿಕ್ಕರ ಪೊಲೀಸರಿಗೆ ದೂರು ನೀಡಿದ್ದರು. ವಿಡಿಯೋ ಹರಿಬಿಟ್ಟ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries