ಎರ್ನಾಕುಳಂ: ಪಾರಶಾಲಾ ಮೂಲದ ಶರೋನ್ ಎಂಬಾತನಿಗೆ ವಿಷ ನೀಡಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಗ್ರೀಷ್ಮಾಳ ತಾಯಿ ಮತ್ತು ಚಿಕ್ಕಪ್ಪನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಇಬ್ಬರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ತನಿಖೆಯ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿತು.
ತಮ್ಮ ಬಂಧನ ಕಾನೂನು ಬಾಹಿರ ಎಂದು ಆರೋಪಿಸಿ ತಾಯಿ ಸಿಂಧು ಮತ್ತು ಚಿಕ್ಕಪ್ಪ ನಿರ್ಮಲ್ ಕುಮಾರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ತಮ್ಮ ವಿರುದ್ಧ ಸಾಕ್ಷ್ಯಾಧಾರಗಳನ್ನು ತಿದ್ದಿದ ಆರೋಪ ಮಾತ್ರ ಹೊರಿಸಬಹುದು. ಈ ಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ಪೋಲೀಸರು ತಮ್ಮ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ಇದು ಅಕ್ರಮ. ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆದ್ದರಿಂದ ಬಂಧನದಲ್ಲಿಡುವ ಅಗತ್ಯವಿಲ್ಲ ಎಂದು ಆರೋಪಿಗಳು ಅರ್ಜಿಯಲ್ಲಿ ಸೂಚಿಸಿದ್ದಾರೆ.
ಆದರೆ ಆರೋಪಿಗಳ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಘಟನೆಯ ತನಿಖೆ ಪ್ರಗತಿಯಲ್ಲಿದೆ. ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸಲಾಗುತ್ತಿದ್ದು, ಆರೋಪಿಗಳಿಗೆ ಜಾಮೀನು ನೀಡುವುದರಿಂದ ಪ್ರಕರಣದ ಮೇಲೆ ಪರಿಣಾಮ ಬೀರಲಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಈ ವಾದಗಳನ್ನು ಒಪ್ಪಿಕೊಂಡ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಶರೋನ್ ಕೊಲೆ ಪ್ರಕರಣ; ಗ್ರೀಷ್ಮಾಳ ತಾಯಿ ಮತ್ತು ಚಿಕ್ಕಪ್ಪನ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
0
ನವೆಂಬರ್ 30, 2022





