ಕಾಸರಗೋಡು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ , ಕಾಸರಗೋಡು ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಗಳ ಜಂಟಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ "ಶೌರ್ಯ" ವಿಪತ್ತು ನಿರ್ವಹಣೆ ಕಾರ್ಯಕ್ರಮದ ಅಂಗವಾಗಿ ವಿಪತ್ತು ನಿರ್ವಹಣೆ ಸಮಿತಿಯ ಉದ್ಘಾಟನೆ ಡಿ.10ರಂದು ಬೆಳಗ್ಗೆ 9.30ಕ್ಕೆ ಉಳಿಯತ್ತಡ್ಕ ಗಣೇಶ ನಗರ ಶ್ರೀ ಶಕ್ತ ಸಭಾಭವನದಲ್ಲಿ ನಡೆಯಲಿದೆ.
ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ಯೋಜನೆಯ ಕಾರ್ಯನಿರ್ವಾಹಕ ಡಾ.ಎಲ್.ಎಚ್. ಮಂಜುನಾಥ್ ಆಶಯ ಭಾಷಣಮಾಡುವರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅಶ್ವತ್ ಪೂಜಾರಿ ಅಧ್ಯಕ್ಷತೆ ವಹಿಸುವರು. ಬೆಳ್ತಂಗಡಿ ಜನಜಾಗೃಏತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಸ್, ಕಾಸರಗೋಡು ಅಗನಿಶಾಮಕದಳ ಸ್ಟೇಷನ್ ಅಧಿಕಾರಿ ಪ್ರಕಾಶ್ ಕುಮಾರ್, ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ಕಾಸರಗೋಡು ಜಿಲ್ಲೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗೋಪಾಲ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು.
10ರಂದು ‘ಶೌರ್ಯ’ ವಿಪತ್ತು ನಿರ್ವಹಣಾ ಸಮಿತಿಯ ಉದ್ಘಾಟನೆ
0
ಡಿಸೆಂಬರ್ 08, 2022

