HEALTH TIPS

ಯುವತಿಯರ ಮದುವೆ ವಯಸ್ಸು 18: ಧರ್ಮಾತೀತವಾಗಿರಲಿ

 

            ನವದೆಹಲಿ: ಧರ್ಮಾತೀತವಾಗಿ ಎಲ್ಲ ಸಮುದಾಯಗಳ ಯುವತಿಯರ ವಿವಾಹ ವಯಸ್ಸನ್ನು 18 ವರ್ಷಕ್ಕೆ ನಿಗದಿಪಡಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿತು.

      ಮುಸ್ಲಿಂ ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸಬೇಕೆಂದೂ ರಾಷ್ಟ್ರೀಯ ಮಹಿಳಾ ಆಯೋಗದ ವಕೀಲ ನಿತಿನ್‌ ಸಲುಜಾ ಅವರ ಮೂಲಕ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು.

                    ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ (ಪಿಸಿಎಂ) ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಗಳಡಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್ತಿಹಿಡಿಯಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

                ಮುಸ್ಲಿಂ ವೈಯಕ್ತಿಕ ಕಾನೂನುಗಳ ಅನುಸಾರ 16 ವರ್ಷದ ಬಾಲಕಿಯ ಮದುವೆಯನ್ನು ಮಾನ್ಯಗೊಳಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಸಿಂಧುತ್ವವನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಈ ಹಿಂದೆ ಪ್ರತ್ಯೇಕವಾಗಿ ಪ್ರಶ್ನಿಸಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries