ಶಿಲ್ಲಾಂಗ್: 'ಇದು 1962 ಅಲ್ಲ. ಅತಿಕ್ರಮಣ ಮಾಡಲು ಪ್ರಯತ್ನಿಸುವವರಿಗೆ ನಮ್ಮ ಧೀರ ಯೋಧರು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ' ಎಂದು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.
ರಾಜ್ಯದ ತವಾಂಗ್ ಸೆಕ್ಟರ್‌ನ ಯಾಂಗ್‌ಟ್ಸೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.





