HEALTH TIPS

ಭಾರತ-ಪಾಕ್ ಗಡಿಯಲ್ಲಿ 3 ಕೆ.ಜಿ ಹೆರಾಯಿನ್ ಸಹಿತ ಡ್ರೋನ್ ವಶ

 

           ಚಂಡೀಗಢ : ಪಂಜಾಬ್ ಪೊಲೀಸರು ಮತ್ತು ಗಡಿ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ಮೂರು ಕೆ.ಜಿ ಹೆರಾಯಿನ್ ಸಹಿತ ಡ್ರೋನ್ ವಶಪಡಿಸಿಕೊಳ್ಳಲಾಗಿದೆ.

                 'ಗಡಿಯಾಚೆಗಿನ ಕಳ್ಳಸಾಗಣೆ ಜಾಲಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ತರ್ನ್ ತರನ್ ಪೊಲೀಸರು ಮತ್ತು ಬಿಎಸ್‌ಎಫ್ ಜಂಟಿ ಕಾರ್ಯಾಚರಣೆಯಲ್ಲಿ ಪಿಎಸ್ ವಾಲ್ತೋಹಾ ಪ್ರದೇಶದಲ್ಲಿ ಶೋಧ ನಡೆಸಿದಾಗ 3 ಕೆ.ಜಿ ಹೆರಾಯಿನ್ ಹೊಂದಿರುವ ಕ್ವಾಡ್ಕಾಪ್ಟರ್ ಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ" ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಟ್ವೀಟ್ ಮಾಡಿದ್ದಾರೆ.

      ಗಡಿ ಭದ್ರತಾ ಪಡೆ ಸುಮಾರು 25 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.

                ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ, ತರ್ನ್ ತರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿಯ ಹೊಲದಲ್ಲಿ 5 ಕೆ.ಜಿ ಹೆರಾಯಿನ್ ನೊಂದಿಗೆ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                ಅಮೃತಸರ ಮತ್ತು ತರ್ನ್ ತರನ್ ಭಾರತ-ಪಾಕಿಸ್ತಾನ ಗಡಿಯಲ್ಲಿ ಸೋಮವಾರ ಸುಮಾರು 10 ಕೆ.ಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ಎರಡು ಡ್ರೋನ್‌ಗಳನ್ನು ಬಿಎಸ್‌ಎಫ್ ಹೊಡೆದುರುಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries