ಪೆರ್ಲ: ಕಣ್ಣೂರು ವಿಶ್ವ ವಿದ್ಯಾನಿಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ಡಿಸೆಂಬರ್ 17 ರಂದು ನಡೆಯಲಿರುವ ದಕ್ಷಿಣ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಪೆರ್ಲ ನಾಲಂದ ಕಾಲೇಜು ಪ್ರಥಮ ಬಿ. ಎಸ್ಸಿ ವಿದ್ಯಾರ್ಥಿನಿ ಗಾನ ಸಮೃದ್ಧಿಯನ್ನು ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶೇಣಿ ಸ್ಮರಣಿಕೆ ನೀಡಿ ಅಭಿನಂದಿಸಿದರು.ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿಬ್ಬಂದಿ ಕಾರ್ಯದರ್ಶಿ ಶಂಕರ ಸ್ವಾಗತಿಸಿ, ಸ್ಟುಡೆಂಟ್ ವೆಲ್‍ಫೇರ್ ಆಫೀಸರ್ ಕೇಶವ ಶರ್ಮ ವಂದಿಸಿದರು. ಕಾಮರ್ಸ್ ವಿಭಾಗದ ಮುಖ್ಯಸ್ಥ ಶ್ರೀನಿಧಿ ನಿರೂಪಿಸಿದರು.
ದಕ್ಷಿಣ ವಲಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನೆ
0
ಡಿಸೆಂಬರ್ 08, 2022
Tags

.jpg)
