HEALTH TIPS

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಸ್ಥಾನಕ್ಕೇರಲು ಎಸ್‌ಸಿ/ಎಸ್‌ಟಿಗಳಿಗೆ ಅವಕಾಶ ನೀಡುತ್ತಿಲ್ಲ: ಸಂಸದೀಯ ಸಮಿತಿ

                 ವದೆಹಲಿ:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಸಾರ್ವಜನಿಕ ವಲಯದ ಘಟಕಗಳಲ್ಲಿ(ಪಿಎಸ್ ಯು) ಹಿರಿಯ ಅಥವಾ ಮಂಡಳಿಯ ಮಟ್ಟದ ಸ್ಥಾನಗಳಿಗೆ ಏರಲು ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ಸೋಮವಾರ ತನ್ನ ವರದಿಯಲ್ಲಿ ತಿಳಿಸಿದೆ ಎಂದು PTI ವರದಿ ಮಾಡಿದೆ.

                     ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣದ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ 'ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ ವಿಶೇಷ ಉಲ್ಲೇಖದೊಂದಿಗೆ ಮಂಡಿಸಲಾದ ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ' ಎಂಬ ವರದಿಯಲ್ಲಿ ಹೇಳಿಕೆ ನೀಡಿದೆ.

                     ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಹಿರಿಯ ಮಟ್ಟದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿಗಳಿಂದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಮಿತಿಯು ಭಾವಿಸುತ್ತದೆ ' ಎಂದು ಬಿಜೆಪಿ ಸಂಸದ ಕಿರಿತ್ ಸೋಲಂಕಿ ನೇತೃತ್ವದ ಸಮಿತಿಯು ಹೇಳಿದೆ.

                    ಸಾರ್ವಜನಿಕ ವಲಯದ ಘಟಕಗಳಲ್ಲಿ ಹಿರಿಯ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಅವರು ಆಯ್ಕೆಯಾಗದಿರಲು ಕಾರಣವನ್ನು ತಿಳಿಯಲು ಬಯಸುವುದಾಗಿ ಸಮಿತಿ ಹೇಳಿದೆ.

                   ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರಕಾರವನ್ನು ಪ್ರಶ್ನಿಸಿದೆ.

                 ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎನ್ನುವುದನ್ನು ಸಮತಿಯು ಗಮನಿಸಿದೆ ಎಂದು The Indian Express ವರದಿ ಮಾಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries