ತಿರುವನಂತಪುರಂ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ಕ್ರಿಸ್‍ಮಸ್ ಔತಣಕೂಟದಲ್ಲಿ ್ಲ ಮುಖ್ಯಮಂತ್ರಿ ಮತ್ತು ಇತರ ಸಚಿವರು ಭಾಗವಹಿಸುವುದಿಲ್ಲ ಎಂದು ತಿಳಿದುಬಂದಿದೆ.
ರಾಜಭವನದಲ್ಲಿ ಆಯೋಜಿಸುವ ಔತಣ ಕೂಟದ ಆಹ್ವಾನವನ್ನು ತಿರಸ್ಕರಿಸಲು ಸರ್ಕಾರ ನಿರ್ಧರಿಸಿದೆ. ಘಟಕ ಪಕ್ಷದ ನಾಯಕರು ಭಾಗವಹಿಸುವುದಿಲ್ಲ.
ಇಂದು ಬೆಳಗ್ಗೆ ಸಲಹಾ ಸಮಿತಿ ಸಭೆಗೂ ಮುನ್ನ ಘಟಕದ ಸಚಿವರ ವಿಶೇಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲೇ ಔತಣಕೂಟಕ್ಕೆ ಹಾಜರಾಗದಿರಲು ನಿರ್ಧರಿಸಲಾಯಿತು.
ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಾಗ್ವಾದ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಸಹಕಾರ ನೀಡದಿರಲು ನಿರ್ಧರಿಸಿದೆ. ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಕೂಡ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ.
ಸರ್ಕಾರದ ಜತೆಗಿನ ತಕರಾರುಗಳನ್ನೆಲ್ಲ ಮರೆತು ರಾಜ್ಯಪಾಲರು ಮುಖ್ಯಮಂತ್ರಿ ಹಾಗೂ ಇತರ ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದರು. ಆದರೆ ಇದನ್ನು ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದೆ.
ರಾಜ್ಯಪಾಲರು ಆಹ್ವಾನಿಸಿರುವ ಕ್ರಿಸ್ ಮಸ್ ಪಾರ್ಟಿಗೆ ಮುಖ್ಯಮಂತ್ರಿ ಹಾಗೂ ಸಚಿವರು ಗೈರಾಗಲು ನಿರ್ಧಾರ: ಜಟಲಗೊಂಡ ಸಂಘರ್ಷ
0
ಡಿಸೆಂಬರ್ 12, 2022
Tags





