HEALTH TIPS

ಸ್ವಾಭಿಮಾನದ ವಿಷಯ ಬಂದಾಗ ದೇಶ ಒಗ್ಗಟ್ಟು: ಪಾಕ್‌ಗೆ ಖಡಕ್ ಸಂದೇಶ ಕೊಟ್ಟ ಶಶಿ ತರೂರ್

 

              ತಿರುವನಂತಪುರ: ಸ್ವಾಭಿಮಾನದ ವಿಷಯ ಬಂದಾಗ ದೇಶವು ರಾಜಕೀಯವನ್ನು ಬದಿಗಿಟ್ಟು ಒಟ್ಟಾಗಿ ನಿಲ್ಲುತ್ತದೆ, ಇದನ್ನು ಹಿತಶತ್ರುಗಳು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

              ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿದ್ದಾರೆ.

ದೇಶದ ವಿಷಯ ಬಂದಾಗ, ರಾಜಕೀಯ ಬದಿಗಿಟ್ಟು ಒಟ್ಟಾಗಿ ನಿಲ್ಲುತ್ತೇವೆ ಎಂದು ತರೂರ್‌ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ್ದಾರೆ.

             ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ ಕೂಡ ಶನಿವಾರ ಬಿಲಾವಲ್ ಭುಟ್ಟೊ ಹೇಳಿಕೆಯನ್ನು ಖಂಡಿಸಿದ್ದರು. ಭೂಪೇಶ್ ಬಘೇಲ ಹೇಳಿಕೆಯನ್ನು ಸಮರ್ಥಿಸಿರುವ ಅವರು ಬಿಲಾವಲ್ ಭುಟ್ಟೊ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.


                    ಇತ್ತೀಚೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ, ಪ್ರಧಾನಿ ನರೇಂದ್ರ ಮೋದಿಯನ್ನು 'ಗುಜರಾತ್‌ನ ಕಟುಕ' ಎಂದು ಹೇಳಿದ್ದರು.

                ಈ ವಿಷಯವಾಗಿ ಬಿಲಾವಲ್ ಭುಟ್ಟೊ ವಿರುದ್ಧ ಭಾರತದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

When it comes to standing up for the country internationally, we are all one. Our enemies & ill-wishers would be well-advised to understand that in India, politics stops when our nation's self-respect is involved. @bhupeshbaghel @INCIndia @ProfCong @PMOIndia
Bhupesh Baghel
@bhupeshbaghel
हमारे प्रधानमंत्री के बारे में टिप्पणी करने की क्या हैसियत तुम्हारी? भारत के प्रधानमंत्री के खिलाफ एक भी अनर्गल टिप्पणी स्वीकार नहीं की जाएगी, यह बहुत अच्छे से जान लें। 🇮🇳
Embedded video

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries