ಕಾಸರಗೋಡು: ಜಿಲ್ಲೆಯನ್ನು ಅಂಗವಿಕಲರ ಸ್ನೇಹಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯಿತಿ ಸಜ್ಜಾಗಿದೆ ಎಂದು ಜಿಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ತಿಳಿಸಿದ್ದಾರೆ.
ಅವರು ಪಡನ್ನಕ್ಕಾಡ್‍ನ ಬೇಕಲ್ ಕ್ಲಬ್‍ನಲ್ಲಿ ಆಯೋಜಿಸಲಾಗಿದ್ದ ಅಂಗವಿಕಲರ ದಿನಾಚರಣೆಯ ಅಂಗವಾಗಿ "ಅಂಗವಿಕಲ ಸ್ನೇಹಿ ಸ್ಥಳೀಯಾಡಳಿತ ಸರ್ಕಾರ" ಎಂಬ ವಿಷಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಕೌಶಲ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ನಡೆದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ತ್ರಿಸ್ತರ ಪಂಚಾಯಿತಿಗಳ ಸಹಯೋಗದಲ್ಲಿ ವಿವಿಧ ಕೌಶಲ್ಯ ಕ್ಷೇತ್ರಗಳಲ್ಲಿ ಯೋಜನೆಗಳನ್ನು ರೂಪಿಸಲಾಗುವುದು. ವಿಕಲಾಂಗ ಮಕ್ಕಳ ತಾಯಂದಿರಿಗೆ ವೃತ್ತಿಪರ ತರಬೇತಿ ಸೇರಿದಂತೆ ಯೋಜನೆ ಇದರಲ್ಲಿ ಒಳಗೊಂಡಿದೆ. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿನೋಯ್ ಚಾಕೋ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಜ್ ಪಾದೂರು ಮುಖ್ಯ ಅತಿಥಿಯಾಘಿ ಭಾಗವಹಿಸಿದ್ದರು. ನೀಲೇಶ್ವರಂ ನಗರಸಭೆ ಅಧ್ಯಕ್ಷ ಟಿ.ವಿ. ಶಾಂತಾ, ಕುತ್ತಿಕೋಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರಳಿ ಹಾಗೂ ನವಕೇರಳ ಮಿಷನ್ ಸಂಯೋಜಕ ಕೆ. ಬಾಲಕೃಷ್ಣನ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಬೆಶನ್ ಅಧಿಕಾರಿ ಪಿ.ಬಿಜು ಸ್ವಾಗತಿಸಿದರು. ಜಿಲ್ಲಾ ಸಾಮಾಜಿಕ ನ್ಯಾಯ ಕಛೇರಿಯ ಹಿರಿಯ ಅಧೀಕ್ಷಕ ಎಂ.ಅಬ್ದುಲ್ಲಾ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ' ವಿಕಲಚೇತನರ ಸಮಾವೇಶ, ಜಿಲ್ಲೆಯಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಜಾರಿಗೊಳಿಸಬೇಕಾದ ಯೋಜನೆಗಳ ಕುರಿತು ಚರ್ಚೆ ನಡೆಯಿತು.
ಅಂಗವಿಕಲಸ್ನೇಹಿ ಯೋಜನೆ ಜಾರಿಗೆ ಜಿಲ್ಲಾ ಪಂಚಾಯಿತಿ ಬದ್ಧ: ಜಿಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್
0
ಡಿಸೆಂಬರ್ 02, 2022
Tags





