ಬದಿಯಡ್ಕ: ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಬ್ರಹ್ಮಕಲಶ ಮಹೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಮಹಾಗಣಪತಿ ಹೋಮ, ತ್ರಿಕಾಲಪೂಜೆ, ಜೀವಕಲಶಪೂಜೆ, ಜೀವೋದ್ವಾಸನೆ, ಶಯ್ಯಾಪೂಜೆ ಜರಗಿತು.
ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಹಾಗೂ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಕಾರ್ಯಗಳು ಜರಗುತ್ತಿದೆ. ಆಡಳಿತ ಮೊಕ್ತೇಸರ ಕುಟುಂಬದವರು, ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಉಬ್ರಂಗಳ ದೇವಸ್ಥಾನದಲ್ಲಿ ಜೀವೋದ್ವಾಸನೆ, ಶಯ್ಯಾಪೂಜೆ
0
ಡಿಸೆಂಬರ್ 30, 2022
Tags

