HEALTH TIPS

ಚಿಲ್ಲರೆ ಹಣದುಬ್ಬರ ಶೇ.5.72ಕ್ಕೆ ಇಳಿಕೆ, ಇದು ಕಳೆದ ಒಂದು ವರ್ಷದಲ್ಲೇ ಕಡಿಮೆ

 

        ನವದೆಹಲಿ: ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು  ಶೇ. 5.72ಕ್ಕೆ ಇಳಿಕೆಯಾಗಿದೆ. ಇದು ಕಳೆದ ಒಂದು ವರ್ಷದಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

           ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ, ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ನವೆಂಬರ್ 2022 ರಲ್ಲಿ ಶೇ. 5.88 ರಷ್ಟು ಇತ್ತು ಮತ್ತು ಡಿಸೆಂಬರ್ 2021 ರಲ್ಲಿಅದು  ಶೇಕಡಾ 5.66 ರಷ್ಟಿತ್ತು.

              ರಾಷ್ಟ್ರೀಯ ಅಂಕಿಅಂಶಗಳ ಕಚೇರಿ(NSO) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ ವರ್ಷದ ನವೆಂಬರ್‌ನಲ್ಲಿ ಶೇ. 4.67 ರಷ್ಟು ಇದ್ದ ಆಹಾರ ಹಣದುಬ್ಬರವು ಡಿಸೆಂಬರ್‌ನಲ್ಲಿ ಶೇ. 4.19ಕ್ಕೆ ಇಳಿಕೆಯಾಗಿದೆ.

              ಹಣದುಬ್ಬರ ಕಡಿಮೆ ಮಾಡುವ ಸಲುವಾಗಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು. 2026 ಮಾರ್ಚ್ ಒಳಗಾಗಿ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 2ರಿಂದ 4ರ ಮಟ್ಟದಲ್ಲಿ ಇರುವಂತೆ ಮಾಡುವುದು ಆರ್​ಬಿಐ ಗುರಿಯಾಗಿದೆ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries